ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ.
ಉಡುಪಿ: ಉಡುಪಿಯಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಗೆ ಉತ್ತಮ ಸಂವಹನ ಕೌಶಲ್ಯ ಹೊಂದಿರುವ ಮಹಿಳಾ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. ವಯಸ್ಸು 30-45 ವರ್ಷಗಳು ಮಾತ್ರ ಹಾಗೂ ಯಾವುದೇ ಪದವೀಧರ ಶಿಕ್ಷಣ ಹೊಂದಿರಬಹುದು. ವೇತನ: 27000 ರಿಂದ 32000 ಪ್ರಯೋಜನಗಳು:ಉತ್ತಮ ಸಂಬಳ, ಭವಿಷ್ಯ ನಿಧಿ, ಗ್ರಾಚ್ಯುಟಿ, ಇಎಸ್ಐಸಿ ಹಾಗೂ ಇಟಿಸಿ. ಸಂದರ್ಶನ: ಶಿವಧಾಮ ವಾಣಿಜ್ಯ ಸಂಕೀರ್ಣ, 1ನೇ ಮಹಡಿ, ನ್ಯೂ ಡೈನಾ ಹೋಟೆಲ್ ಹಿಂದೆ, ಅಜ್ಜರಕಾಡು, ಉಡುಪಿ.ಸಂಪರ್ಕಿಸಿ: 7676633785
ಉಡುಪಿ:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ […]
ಮಂಡ್ಯದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
ಉಡುಪಿ: ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ವಕ್ತಾರ ಶ್ರೀಕಾಂತ್ ಶೆಟ್ಟಿ ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ಬಹುಸಂಖ್ಯಾತರ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಹಿಂದೂ ಹಬ್ಬಗಳನ್ನು ಆಚರಿಸಲು ಸವಾಲು ಎದುರಿಸುವಂತಾಗಿದೆ. ಇಷ್ಟೊಂದು ದಾಳಿ ಆಗುತ್ತಿದ್ದರೂ ಹಿಂದೂಗಳು ಮಾತ್ರ ದೂರು ದಾಖಲಿಸಲು ಸೀಮಿತರಾಗಿದ್ದಾರೆ. ಈ ವ್ಯವಸ್ಥೆ ಹಿಂದೂಗಳ ಕೈ ಕಟ್ಟಿಹಾಕಿದೆ. ಮಂಡ್ಯ ಘಟನೆಯಲ್ಲಿ […]
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು
ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ. 14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡು, ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ […]
ಉಡುಪಿ: ಸೀಮೆಎಣ್ಣೆ ಕುಡಿದು ಅಸ್ವಸ್ಥಗೊಂಡ ವ್ಯಕ್ತಿ ಮೃತ್ಯು.
ಉಡುಪಿ: ಮಲ್ಪೆ ತೊಟ್ಟಂ ಎಂಬಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಸೆ.12ರಂದು […]