ಮಣಿಪಾಲ: ಇಂದು ಸೆ.(14)ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ

ಉಡುಪಿ: ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ ಇಂದು (ಸೆ.14) ಸಂಜೆ 5ಗಂಟೆಗೆ ಮಣಿಪಾಲ್ ಇನ್ ಹೋಟೆಲ್ ನಲ್ಲಿ ನಡೆಯಲಿದೆ. ಮಣಿಪಾಲ ಕೆಎಂಸಿಯ ಪ್ರೊಫೆಸರ್ ಡಾ. ಕಿರಣ್ ಕೆ.ವಿ. ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಯಮಿ ಅಭಿನಂದನ್ ಎ. ಶೆಟ್ಟಿ ಅವರು ಪುಸ್ತಕ ವಿಮರ್ಶೆ ಮಾಡಲಿದ್ದಾರೆ. ವೈದ್ಯೆ ಡಾ. ಶೃತಿ ಬಲ್ಲಾಳ್ ಉಪಸ್ಥಿತರಿರಲಿದ್ದಾರೆ.

ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಹುಡುಗಿ ನೋಡುತ್ತಿದ್ದಂತೆಯೇ ಸರ ಕದ್ದೊಯ್ದ ಖದೀಮ.!

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಿಂದ ಸರ ಕಳವು ಮಾಡಿರುವ ಘಟನೆ ಕಾರ್ಕಳ ಮೂರು ಮಾರ್ಗದ ಬಳಿ ಸಂಭವಿಸಿದೆ.ಮೂರು ಮಾರ್ಗದ ಬಳಿ ಇರುವ ಜ್ಯುವೆಲ್ಲರಿ ಅಂಗಡಿಯೊಂದಕ್ಕೆ ಓರ್ವ ಮಧ್ಯವಯಸ್ಕ ವ್ಯಕ್ತಿ ಬಂದು ಚಿನ್ನದ ಕರಿಮಣಿ ಸರವನ್ನು ತೋರಿಸುವಂತೆ ಹೇಳಿದ್ದಾನೆ. ಅದರಂತೆ ಕೆಲಸದಾಕೆ ಚಿನ್ನದ ಕರಿಮಣಿ ಸರವನ್ನು ನೋಡಲು ಕೊಟ್ಟಿದ್ದರು. ಕೆಲಹೊತ್ತು ಕೆಲಸದ ಹುಡುಗಿ ಜೊತೆ ಮಾತನಾಡಿದ ಆತ ಹುಡುಗಿ ನೋಡುತ್ತಿದ್ದಂತೆಯೇ ಚಿನ್ನದ ಕರಿಮಣಿ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ವೇಳೆ ಹುಡುಗಿ ಕಳ್ಳ, ಕಳ್ಳ […]

ಉಡುಪಿ:“ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ”: ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು

ಉಡುಪಿ: ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾರೈಸಿದರು.ಅವರು ಇಂದು ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಉದ್ಘಾಟಿಸಿ ಆಶೀರ್ವಚನ […]

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಗೆ ಹಲ್ಲೆ, ಕೊಲೆ ಬೆದರಿಕೆ: ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಠಾಣಾ ವ್ಯಕ್ತಿಯಲ್ಲಿ ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ‌ ನಡೆಸಿ, ಬಟ್ಟೆಹರಿದು ಮಾನಹಾನಿ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಶಂಕರ ದೇವಾಡಿಗ ಎಂಬಾತ ವಿದ್ಯಾರ್ಥಿನಿಗೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಂಕರ ದೇವಾಡಿಗ ವಿದ್ಯಾರ್ಥಿನಿಯೊಂದಿಗೆ ಕೆಲದಿನಗಳಿಂದ ಅನ್ಯೋನ್ಯವಾಗಿದ್ದ ಎನ್ನಲಾಗಿದು, ಈ ವಿಚಾರ ಆಕೆಯ ತಾಯಿಗೆ ತಿಳಿದು‌ ಆತನೊಂದಿಗೆ ಮಾತನಾಡದಂತೆ ಮಗಳಿಗೆ ಎಚ್ಚರಿಕೆ ನೀಡಿದ್ದರು. […]

ಕುಂದಾಪುರ: ಮೀನುಗಾರಿಕೆ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದು ವ್ಯಕ್ತಿ ಮೃತ್ಯು.

ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಈ ಬಗ್ಗೆ ಕುಂದಾಪುರ […]