ಕಲ್ಜಿಗ ಸಿನಿಮಾ ವಿವಾದ: ಮೊದಲು ಸಿನೆಮಾ ನೋಡಿ, ನಂತರ ಮಾತಾಡಿ; ಟೀಕಾಕಾರರಿಗೆ ನಾಯಕ‌ ನಟ ಅರ್ಜುನ್ ಕಾಪಿಕಾಡ್ ಟಾಂಗ್

ಉಡುಪಿ: ನಾಲ್ಕು ದಿನಗಳ ಹಿಂದೆ ರಿಲೀಸ್ ಆಗಿದ್ದ ಕನ್ನಡ ಸಿನಿಮಾ ‘ ಕಲ್ಜಿಗ’ ವಿವಾದವನ್ನು ಸೃಷ್ಟಿ ಮಾಡಿತ್ತು. ದೈವಾರಾಧನೆಯನ್ನು ಸಿನಿಮಾದಲ್ಲಿ ಬಳಸಿದ್ದಕ್ಕೆ ಕರಾವಳಿಯ ಕೆಲವು ಜನ ಆಕ್ಷೇಪ ವ್ಯಕ್ತಪಡಿಸಿದ್ದರು.ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿನಿಮಾದ ನಾಯಕ ನಟ ಅರ್ಜುನ್ ಕಾಪಿಕಾಡ್ ಅವರು, ಮೊದಲು ಸಿನಿಮಾ ನೋಡಿ, ನಂತರ ಮಾತಾಡಿ ಎಂದು ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿನಿಮಾದ ಒಂದು ಸನ್ನಿವೇಶವನ್ನು ಹಿಡಿದು ಮಾತನಾಡಿದರೆ ಅದು ತಪ್ಪಾಗುತ್ತದೆ. ಈಗಾಗಲೇ ಸಾವಿರಾರು ಮಂದಿ ಸಿನೆಮಾ […]

ಉಡುಪಿ: ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ.

ಉಡುಪಿ: ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಸೆ.16 ರಂದು ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2024 ಸ್ವೀಕರಿಸಿ ಮಾತನಾಡಿದರು. […]

ಮಂಗಳೂರು: ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ.

ಮಂಗಳೂರು: ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ.ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಇದೇ ಸಪ್ಟೆಂಬರ್ 15ರಂದು ನಗರದ ಸಂದೇಶ ಸಭಾಂಗಣದಲ್ಲಿ ಆಯೋಜಿಸಿತ್ತು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಶ್ರೀ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. […]

ಹೆಬ್ರಿ: ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹಿಂದಿ ದಿವಸ್ ಆಚರಣೆ.

ಹೆಬ್ರಿ: ಉನ್ನತ ಶಿಕ್ಷಣದಲ್ಲೂ ಐಚ್ಚಿಕ ವಿಷಯಗಳ ಜೊತೆಗೆ ಭಾಷಾ ವಿಷಯಗಳಿಗೂ ಒತ್ತು ನೀಡುವುದು ಭಾಷೆಗಳ ಬೆಳವಣಿಗೆಗೆ ಸಹಕಾರಿ. ಸರಸ್ವತಿ ಖಜಾನೆಯನ್ನು ಬಳಸಿದಷ್ಟು ಖಾಲಿ ಆಗದೆ ಜ್ಞಾನ ಭಂಡಾರ ಹೆಚ್ಚುತ್ತದೆ ಅಂತೆಯೆ ಹಿಂದಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಜ್ಞಾನಾಭಿವೃದ್ಧಿ ಆಗುತ್ತದೆ ಎಂದರು. ಅಲ್ಲದೆ ಹಿಂದಿ ಭಾಷೆ ಸಹಿತ ನಮ್ಮ ಸಂವಿಧಾನದಲ್ಲಿ ಮಾನ್ಯತೆ ಪಡೆದ ಎಲ್ಲಾ ಭಾಷೆಗಳೂ ರಾಷ್ಟ್ರ ಭಾಷೆಗಳೇ, ಎಂದು ಕಾರ್ಯಕ್ರಮ ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲೆ ಹಾಗೂ ಸಾಹಿತಿ ಡಾ. ಮಾಧವಿ ಎಸ್ ಭಂಡಾರಿ ನುಡಿದರು. […]

ಉಡುಪಿ: ಪಿಎಸ್ ಐ ಹೃದಯಾಘಾತದಿಂದ ನಿಧನ

ಉಡುಪಿ: ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್ ಐ ನಿತ್ಯಾನಂದ ಶೆಟ್ಟಿ (52) ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೈಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.