ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ, ಬೆಂಗಳೂರು ಯಶಸ್ವಿ ಆಂತರಿಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆಯೋಜನೆ

ಬೆಂಗಳೂರು,ಸೆಪ್ಟೆಂಬರ್ 16: ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ, ಬೆಂಗಳೂರು, ಇತ್ತೀಚೆಗೆ ದೊಡ್ಡರಾಷ್ಟ್ರೀಯ SIH ಸ್ಪರ್ಧೆಗೆ ತಯಾರಿಗಾಗಿ ಆಂತರಿಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (SIH) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು. ಹ್ಯಾಕಥಾನ್ ರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿನಿಧಿಸಲು ವಿಶ್ವವಿದ್ಯಾಲಯದಿಂದ ಸ್ವಯಂ ಪ್ರೇರಿತ ಮತ್ತು ಪ್ರತಿಭಾನ್ವಿತ ತಂಡಗಳನ್ನು ಗುರುತಿಸುವ ಮತ್ತು ಪೋಷಿಸುವ ಗುರಿಯನ್ನು ಹೊಂದಿತ್ತು.81 ಪುರುಷರು ಮತ್ತು 99 ಮಹಿಳೆಯರನ್ನು ಒಳಗೊಂಡ 30 ಕ್ಕೂ ಹೆಚ್ಚು ತಂಡಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವು.ಕಠಿಣ ಮೌಲ್ಯಮಾಪನ ಪ್ರಕ್ರಿಯೆಯ ನಂತರ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ – 2024 ರಲ್ಲಿ […]

ಮಂಗಳೂರು:ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್ ಮಂಗಳೂರು ಇಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದವಆಚರಿಸಲಾಯಿತು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ವಾಸ್ತುಶಿಲ್ಪಿ ತಜ್ಞೆಯಾದ ದೀಪಿಕಾ ಎ ನಾಯಕ್ ರವರು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು.ಉಪನ್ಯಾಸಕರು ಪೂಕಳಂನ ಸುತ್ತ ತಿರುವಾದಿರ ನೃತ್ಯವನ್ನು ಮಾಡಿದ್ದು, ಇದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಈ ಸಂದರ್ಭದಲ್ಲಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಹಾಗೂ ಉಪನ್ಯಾಸಕ ವೃಂದದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಖಾಸಗಿ ಬಸ್: ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಕಾಪುವಿನ ಉಳಿಯಾರಗೋಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಉಡುಪಿ – ಶಿರ್ವ ನಡುವೆ ಸಂಚರಿಸುತ್ತಿದ್ದ ಮಿಲಾನ್ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸರಿದು ನಿಂತಿದೆ. ತಕ್ಷಣವೇ ಸ್ಥಳೀಯರು ಕಾರ್ಯಾಚರಣೆ ನಡೆಸಿ, ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಬಂದು ಸುಗಮ […]

ರಾಜ್ಯ ಸರಕಾರದಿಂದ ಕರಾವಳಿಯ 3 ಜಿಲ್ಲೆಗಳ ನಿರ್ಲಕ್ಷ್ಯ:ಉಡುಪಿ ಬಿಜೆಪಿ ಶಾಸಕರ ಎಚ್ಚರಿಕೆ

ಉಡುಪಿ, ಸೆ.16: ರಾಜ್ಯ ಸರಕಾರ ಕರಾವಳಿಯ ಮೂರು ಜಿಲ್ಲೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಒಂದು ರೂಪಾಯ ಅನುದಾನ ಬಿಡುಗಡೆಯಾಗಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಮುಖ್ಯಮಂತ್ರಿಗಳ ಮನೆಯ ಮುಂದೆ ಧರಣಿ ನಡೆಸಲಾಗುವುದು ಎಂದು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು, ಸಂಸತ್ ಸದಸ್ಯರೊಂದಿಗೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು. ನಗರದ ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ […]

ಮೂಡುಬಿದಿರೆ: ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ತ್ರೋಬಾಲ್ ಸ್ಪರ್ಧೆ

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.