ಉಡುಪಿ:ವಿಶ್ವಕರ್ಮರಿಂದ ಸುಂದರ ಸಮಾಜ ನಿರ್ಮಾಣ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ: ಸುಂದರ ಸಮಾಜ ನಿರ್ಮಾಣ ಮಾಡುವಲ್ಲಿ ವಿಶ್ವಕರ್ಮರ ಪಾತ್ರ ಮಹತ್ತರವಾದುದು. ವಿಶ್ವಕರ್ಮಸಮುದಾಯದವರ ವಾಸ್ತುಶಿಲ್ಪ ರಚನಾ ಶೈಲಿಯು ಪ್ರತಿಯೊಬ್ಬರನ್ನು ಬೆರಗುಗೊಳಿಸುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ನಗರದ ಕುಂಜಿಬೆಟ್ಟುವಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪಂಚಮುಖಿ ವಿಶ್ವಕರ್ಮರನ್ನು ನಾನಾ ರೀತಿಯಲ್ಲಿ ಸಮಾಜ ನೆನೆಪಿನಲ್ಲಿಟ್ಟುಕೊಳ್ಳುತ್ತದೆ. ಮರಗೆಲಸ, ಕಬ್ಬಿಣದ […]
ಕುಂದಾಪುರ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಹೆಮ್ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ದೆಹಲಿಯ ನೂತನ ಸಿಎಂ ಆಗಿ ಆಪ್ ನಾಯಕಿ ‘ಅತಿಶಿ ಮರ್ಲೆನಾ’ ಆಯ್ಕೆ.

ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಥಿ ಅತಿಶಿ ದೆಹಲಿಯ ನೂತನ ಸಿಎಂ ಆಗಿ ಆಯ್ಕೆಗೊಂಡಿದ್ದು, ಸಿಎಂ ಕೇಜ್ರಿವಾಲ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಆಪ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಅತಿಶಿ ಮರ್ಲೆನಾ ಸಿಂಗ್ ಭಾರತೀಯ ರಾಜಕಾರಣಿ , ರಾಜಕೀಯ ಕಾರ್ಯಕರ್ತೆ ಮತ್ತು ದೆಹಲಿಯ ಕಲ್ಕಾಜಿಯಿಂದ ಶಾಸಕರಾಗಿದ್ದಾರೆ. ಅವರು ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿದ್ದಾರೆ ಮತ್ತು ಪ್ರಸ್ತುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ , PWD, ಸಂಸ್ಕೃತಿ […]
ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನ: ವ್ಯಕ್ತಿ ಮೃತ್ಯು.

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ. ಸೆ.17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.