ಕುಂದಾಪುರ: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.

ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ.ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ,ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಹೆಬ್ರಿ: ವಿದ್ಯಾರ್ಥಿಗಳು ಕನಸು ಕಾಣಬೇಕು, ನಮ್ಮ ಕನಸಿಗೆ ನಾವೇ ತೊಡಕಾಗಬಾರದು: ಡಾ.ವಿರೂಪಾಕ್ಷ ದೇವರಮನೆ.

ಹೆಬ್ರಿ: ವಿದ್ಯಾರ್ಥಿಗಳು ಕನಸು ಕಾಣಬೇಕು. ನಾವು ಕಾಣುವ ಕನಸು ನಮ್ಮನ್ನು ಗುರಿಯಡೆಗೆ ತಲುಪಿಸುತ್ತದೆ. ಈ ನೆಲೆಯಲ್ಲಿ ಕಾರ್ಯಪ್ರವೃತ್ತರಾಗಬೇಕೇ ಹೊರತು ನಮ್ಮ ಕನಸಿಗೆ ನಾವೇ ತೊಡಕಾಗಬಾರದು. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶದಷ್ಟು ಬೇರೆ ಯಾವುದೇ ಹಂತದಲ್ಲಿ ಸಿಗುವುದಿಲ್ಲ. ನಮಗೆ ನಾವೇ ಗೌರವವನ್ನು, ನಂಬಿಕೆಯನ್ನು, ರೂಡಿಸಿಕೊಂಡಲ್ಲಿ ಯಶಸ್ಸು ಸಾಧ್ಯವಾಗುತ್ತದೆ ಎಂದು ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಅವರು ಹೇಳಿದರು. ಇವರು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ನಿನಗೆ ನೀನೇ ಶಿಲ್ಪಿ ಕಾರ್ಯಕ್ರಮದಡಿ […]

ಸೆ.22 ರಂದು ಉಡುಪಿ ಜಿಲ್ಲಾಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ

ಉಡುಪಿ: ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜು ಹಾಗೂ ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಅಸಂಘಟಿತ ಗ್ಯಾರೇಜು ಕಾರ್ಮಿಕರ ನೋಂದಣಿ ಅಭಿಯಾನ ಮತ್ತು ಶಿಬಿರವನ್ನು ಇದೇ ಸೆ.22ರಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಮತ್ತು […]

ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು.

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಕೇಸ್ ದಾಖಲಾಗಿರುವ ಮುನಿರತ್ನ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾಋ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂಕೆ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ […]

ಕಾಸರಗೋಡು: ಆಟವಾಡುವಾಗ ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತ್ಯು.

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಮೃತ ಪಟ್ಟ ಬಾಲಕ ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್. ಮಾಂಗಾಡ್‌ನ ಕುಲಿಕುನ್ನಂನ ಸಂಬಂಧಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದದ್ದು, ಆಟವಾಡುತ್ತಿದ್ದ ಬಾಲಕನ ಮೇಲೆ ಕಬ್ಬಿಣದ ಗೇಟ್ ಬಿದ್ದಿದೆ. ಅದರಡಿ ಸಿಲುಕಿದ ಬಾಲಕನನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದು‌.