ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವಾರ್ಷಿಕ ಸಾಮಾನ್ಯ ಸಭೆ
ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಅಜ್ಜರಕಾಡಿನ ಪುರಭವನದಲ್ಲಿ ಇಂದು ನಡೆಯಿತು. ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ 2.10 ಕೋಟಿ ರೂ. ಶಿಕ್ಷಣ ನಿಧಿಯನ್ನು ಸಂಗ್ರಹಿಸಿ ಸಹಕಾರಿ ಮಹಾಮಂಡಲಕ್ಕೆ ನೀಡಿದ್ದೇವೆ. ಹೆಚ್ಚಿನ ಜಿಲ್ಲೆಗಳಲ್ಲಿ ಸಹಕಾರಿ ಸಂಸ್ಥೆಗಳು ನಷ್ಟದಲ್ಲಿದ್ದು, ಯಾವುದೇ ವ್ಯವಹಾರ ಮಾಡುತ್ತಿಲ್ಲ. ಹೀಗಾಗಿ ಯಾವ ಜಿಲ್ಲೆಗಳು ಹೆಚ್ಚು ಶಿಕ್ಷಣ ನಿಧಿ ಸಂಗ್ರಹಿಸುತ್ತವೆಯೋ ಅಂತಹ […]
ಸೆ.29ರಂದು ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ
ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನವನ್ನು ಸೆ. 29ರಂದು ಉಡುಪಿ ಕುಂಜಿಬೆಟ್ಟುವಿನ ಶಾರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ತಿಳಿಸಿದರು. ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಅಂದು ಬೆಳಿಗ್ಗೆ 10ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ […]
ಕಾರ್ಕಳ ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ತರುಣ್ (50kg) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕೆ.ಶ್ರೀನಿತಾ. ಎಸ್. ಕಾಮತ್ (56kg) , ಅಕ್ಷಯ್ (82kg ),ಸಾವಿಯೋ (62 kg) ವಿಭಾಗದಲ್ಲಿ […]
ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ
ಕುಂದಾಪುರ: ತಾಲೂಕಿನ ಜಪ್ತಿ ಗ್ರಾಮದ ಆನಂದ ಕುಲಾಲ್ ಅವರ ಪುತ್ರ ಕೃಷ್ಣರಾಜ (31) ಸೆ. 18ರಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಕಾಂ ಮುಗಿಸಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 6 ತಿಂಗಳಿನಿಂದ ಕೆಲಸವಿಲ್ಲದೇ ಊರಿನಲ್ಲಿ ನೆಲೆಸಿದ್ದರು. 3 ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದು, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ತಾಯಿ ಬೇಬಿ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ.
ಕುಂದಾಪುರ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿಯವರುರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ.ಅರುಣ್ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ,ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.