ಉಡುಪಿ:ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ”

ಉಡುಪಿ:ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐ ಎಸ್ ಟಿ ಇ ವಿದ್ಯಾರ್ಥಿ ಘಟಕವು ದಿನಾಂಕ 17 ಸೆಪ್ಟೆಂಬರ್ 2024 ರಂದು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್ ಎಮ್ ವಿಶ್ವೇಶ್ವರಯ್ಯನವರ 165ನೇ ಜನ್ಮ ದಿನದ ಅಂಗವಾಗಿಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ ಜಿಅಸೋಸಿಯೇಟ್ಸ್ ನ ಇಂಜಿನಿಯರ್ ಶ್ರೀ ಯೋಗೀಶ್ ಚಂದ್ರ ಧಾರಾ ಇವರು ಭಾಗವಹಿಸಿದ್ದರು. ಇವರು ಮಾತನಾಡಿ ಸರ್ ಎಮ್ ವಿಶ್ವೇಶ್ವರಯ್ಯನವರು ನಮ್ಮ ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ಸ್ಮರಿಸಿದರು ಹಾಗೂ ವಿಶ್ವೇಶ್ವರಯ್ಯನವರು […]

ಕುಂದಾಪುರ:ಫುಟ್ಬಾಲ್ ಪಂದ್ಯಾಟ; ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದಲ್ಲಿ ದ್ವಿತೀಯ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. […]

ಉಡುಪಿ:ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು–ವತಿಯಿಂದ ವಿವಿಧಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಂದ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರಕ್ಕೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ,ಬೆಂಗಳೂರು, ದೂರವಾಣಿ ಸಂಖ್ಯೆ: 080-22213530 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್,ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಸಾಮಾನ್ಯ ಪದವಿ ಮಟ್ಟದಕೋರ್ಸ್, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಂದ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದವೆಬ್‌ಸೈಟ್ https://shp.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮಣಿಪಾಲದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ […]

ಶ್ರೀಮತಿ ಲೀಲಾವತಿ ಯಾನೆ ರುಕ್ಮಿಣಿ ಸಾಮಂತ್ ನಿಧನ

ಉಡುಪಿ:ದಿವಂಗತ ಮುಂಡ್ಕಿನಜಡ್ಡು ಲಕ್ಷ್ಮಣ ಸಾಮಂತ್ ಯಾನೆ ನರಸಿಂಹ ಸಾಮಂತ್ ರವರ ಧರ್ಮಪತ್ನಿ, ರಾಧಾಕೃಷ್ಣ ಮತ್ತು ಅಶೋಕ್ ಸಾಮಂತ್ ರವರ ಮಾತೃ, 84 ವರ್ಷ ಪ್ರಾಯದ ಶ್ರೀಮತಿ ಲೀಲಾವತಿ ಯಾನೆ ರುಕ್ಮಿಣಿ ಸಾಮಂತ್, ಶುಕ್ರವಾರ ಸಂಜೆ 7:15 ಗಂಟೆಗೆ ಸ್ವಗ್ರಹದಲ್ಲಿ ದೈವಾಧೀನ ರಾಗಿರುವರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತ್ಯ ಕ್ರಿಯೆಯು ಇಂದು ದಿನಾಂಕ 21- 09-2024 ರ ಶನಿವಾರ ಬೆಳಿಗ್ಗೆ 8-30 ಗಂಟೆಗೆ ಮುಂಡ್ಕಿನಜಡ್ಡು ವಿನಲ್ಲಿ ಜರಗಲಿದೆ.