ಉಡುಪಿ: ಕೃಷಿ ಪಂಡಿತ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲುಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ […]
ಉಡುಪಿ: ಬಿಜಿಎಸ್ ಮೋಟಾರ್ಸ್ ಸುಜುಕಿಯಲ್ಲಿ ಹಬ್ಬಗಳ ಪ್ರಯುಕ್ತ ವಿಶೇಷ ಕೊಡುಗೆಗಳು: ಬಂಪರ್ ಪ್ರೈಸ್ ಆಗಿ ‘ಮಾರುತಿ ಸುಜುಕಿ ಫ್ರಾಂಕ್ಸ್’

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಬಿಜಿಎಸ್ ಮೋಟರ್ಸ್ ಸುಜುಕಿಯಲ್ಲಿ ಸಾಲು ಸಾಲು ಹಬ್ಬಗಳ ಆಚರಣೆ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಬಂಪರ್ ಕೊಡುಗೆಗಳನ್ನು ಆಯೋಜಿಸಿದೆ. ಬಂಪರ್ ಪ್ರೈಸ್ ಆಗಿ ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ರೂ.10,000 ವರೆಗಿನ ಮೌಲ್ಯದ ಚಿನ್ನದ ನಾಣ್ಯಗಳನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸುಜುಕಿ Gixxer 250 (5NO), Apple iPhone (50 NO) ಹಾಗೂ ಹೋಮ್ ಥಿಯೇಟರ್ (55 NO) ಕೂಡ ಗೆಲ್ಲಬಹುದು. ಪ್ರತಿ ಖರೀದಿಗೆ ಉಚಿತ ಹೆಲ್ಮೆಟ್ ನೀಡಲಿದ್ದು, ಡೌನ್ ಪೇಮೆಂಟ್ ಕನಿಷ್ಠ ರೂ.10,000 […]
ಉಡುಪಿ:ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. […]
ಉಡುಪಿ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ವಿಧಾನಪರಿಷತ್ ಉಪ ಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕೆಂದರು. […]
ಉಡುಪಿ: ಮದ್ಯ ಸೇವಿಸಿ ನಿರ್ಲಕ್ಷ್ಯತನದಿಂದ ಬಸ್ ಚಾಲನೆ; ಪ್ರಕರಣ ದಾಖಲು.

ಉಡುಪಿ: ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸಿದ್ದು, ಆತನನ್ನು ತಪಾಸಣೆ ಮಾಡಿದಾಗ ಮದ್ಯ […]