ಉಡುಪಿ:ಸರಕಾರದ ಸೌಲಭ್ಯಗಳನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ತಲುಪಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರುಗಳಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರುಗಳನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರಕಾರ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ […]
ಚಲಿಸುವ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.

ಮಥುರಾ: ಮೂವರು ಕಿಡಿಗೇಡಿಗಳು 13 ವರ್ಷದ ಬಾಲಕಿಯನ್ನು ಅಪಹರಿಸಿ, ಚಲಿಸುವ ಕಾರಿನಲ್ಲೇ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕಾರಿನಿಂದ ಹೊರಗೆಸೆದಿದ್ದಾರೆ ಎಂದು ಆರೋಪಿಸಲಾಗಿದೆ ಈ ಬಗ್ಗೆ ಬಾಲಕಿ ತಂದೆ ನೀಡಿರುವ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಮಥುರಾದಲ್ಲಿ ಘಟನೆ ನಡೆದಿದ್ದು, ಅಸ್ವಸ್ಥಗೊಂಡಿದ್ದ ಆಕೆಯನ್ನು ವೈದ್ಯರ ಬಳಿ ಪೋಷಕರು ಕರೆದೊಯ್ದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಇದೀಗ ಆಕೆಯ ಪೋಷಕರು ಛಾಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ […]
ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ: ವಿದ್ಯಾರ್ಥಿಯ ಬಂಧನ, ಮೊಬೈಲಿನಲ್ಲಿ 8 ಸಾವಿರ ವಿಡಿಯೋಗಳು ಪತ್ತೆ..!

ಬೆಂಗಳೂರು: ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಕುಶಾಲ್ ಎಂಬ ವಿದ್ಯಾರ್ಥಿಯೇ ಬಂಧಿತ ಆರೋಪಿ. ಈತ ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆತನನ್ನು ಬಂಧನ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಈ ಘಟನೆಯು ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟಿರುವುದನ್ನು […]
ಕುಂದಾಪುರ: ಕರಾಟೆ ಪಂದ್ಯಾಟದಲ್ಲಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ) ಹಾಗೂ ಎಸ್. ಎನ್. ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ ಸಾಯಿ ವಿಘ್ನೇಶ್(82+kg) ವಿಭಾಗದಲ್ಲಿ ಪ್ರಥಮ ಸ್ಥಾನ,ಅಶ್ಮಿತ್ ಸಿ.ಪೂಜಾರಿ (-45kg) […]
ಉಡುಪಿ: ಯುವಕ ನಾಪತ್ತೆ

ಉಡುಪಿ: ನಿಟ್ಟೂರಿನಲ್ಲಿರುವ ಬಾಳಿಗ ಫಿಶ್ನೆಟ್‌ನಲ್ಲಿ ಕೆಲಸ ಮಾಡಿ ಕೊಂಡಿದ್ದ ಬನಮಾಲಿ(29) ಎಂಬವರು ಸಮೀಪದ ಹಾಸ್ಟೆಲ್‌ನಲ್ಲಿ ವಾಸಮಾಡಿಕೊಂಡಿದ್ದು, ಸೆ.12ರಂದು ಮಧ್ಯಾಹ್ನ 12:30 ಗಂಟೆಗೆ ಹಾಸ್ಟೆಲ್‌ನಿಂದ ಹೊರಗಡೆ ಹೋದವರು ಈವರೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.