ಉತ್ತರ ಭಾರತದ ಕಾರ್ಮಿಕರ ನಡುವೆ ಬೀದಿ ಜಗಳ

ಉಡುಪಿ: ಕ್ಷುಲಕ ಕಾರಣಕ್ಕೆ ಉತ್ತರ ಭಾರತದ ಕಾರ್ಮಿಕರು ದೊಣ್ಣೆ, ಕೈಗಳಿಂದ ಹೊಡೆದಾಡಿಕೊಂಡ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಕಾರ್ಮಿಕರ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಸಿಕ್ಕ ಸಿಕ್ಕ ವಸ್ತುಗಳಲ್ಲಿ ಹಲ್ಲೆ ನಡೆಸಿ ಹೊಡೆದಾಡಿಕೊಂಡಿದ್ದಾರೆ‌. ಕೆಲಸದ ನಿಮಿತ್ತ ಉಡುಪಿಗೆ ಆಗಮಿಸಿದ್ದ ಕಾರ್ಮಿಕರು, ಕೆಲಸ ಮುಗಿಸಿಕೊಂಡು ಹೋದ ಮೇಲೆ ರಾತ್ರಿ ಹೊತ್ತು ಗಲಾಟೆ ಮಾಡಿಕೊಂಡಿದ್ದಾರೆ. ಇದೀಗ ಕಾರ್ಮಿಕರ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೆ.24ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶ ಕೈಬಿಡುವಂತೆ ಆಗ್ರಹಿಸಿ ಧರಣಿ

ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ತಿಳಿಸಿದ್ದಾರೆ. ಉಡುಪಿ ಡಯಾನ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದಾಗಿ ಜನವಸತಿ […]

ಉಡುಪಿ: ಕಡಿಯಾಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿ ನಾಪತ್ತೆ.

ಉಡುಪಿ, ಸೆಪ್ಟೆಂಬರ್ 23: ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿಜಯ ಶೆಟ್ಟಿ(57) ಎಂಬ ವ್ಯಕ್ತಿಯು ಸೆಪ್ಟಂಬರ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ: ಒಡಿಸ್ಸಾ ಮೂಲದ ವ್ಯಕ್ತಿ ನಾಪತ್ತೆ.

ಉಡುಪಿ, ಸೆಪ್ಟೆಂಬರ್ 23: ಮೂಲತಃ ಒಡಿಸ್ಸಾ ರಾಜ್ಯದ ಮಯೂರ್ಭಂಜ್ ಜಿಲ್ಲೆ ಸುಲಿಯಾಪದ ತಾಲೂಕು ಕದಾಕೋಥಾ ಗ್ರಾಮದ ನಿವಾಸಿ ಪ್ರಸ್ತುತ ನಗರದ ನಿಟ್ಟೂರಿನ ಬಾಳಿಗ ಫಿಶ್ನೆಟ್ ಒಡಿಸ್ಸಾ ಹಾಸ್ಟೆಲ್‌ನಲ್ಲಿ ವಾಸವಿದ್ದ ಬನಮಾಲಿ ನಾಯ್ಕ್ (29) ಎಂಬ ವ್ಯಕ್ತಿಯು ಸೆಪ್ಟಂಬರ್ 12 ರಿಂದ ನಾಪತ್ತೆಯಾಗಿರುತ್ತಾರೆ. 170 ಸೆಂ.ಮೀ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದ ಇವರು, ಹಿಂದಿ ಹಾಗೂ ಓಡಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ […]

ಉಡುಪಿ: ಮಹಿಳೆ ನಾಪತ್ತೆ.

ಉಡುಪಿ, ಸೆಪ್ಟೆಂಬರ್ 23: ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ […]