ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಮಕ್ಕಳ ಅಶ್ಲೀಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾ|ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಪಿ. ಪರ್ದೀವಾಲಾ ಅವರಿರುವ ಪೀಠ ತೀರ್ಪು ಪ್ರಕಟಿಸಿದೆ. ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುವುದು ಪೋಕ್ಸೋ ಹಾಗೂ ಐಟಿ ಕಾಯ್ದೆ ಪ್ರಕಾರ ಅಪರಾಧವಲ್ಲ ಎಂದು ಜ.11ರಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂ ತೀರ್ಪು ನೀಡಿದ್ದು, ಮದ್ರಾಸ್ ಹೈಕೋರ್ಟ್ ತೀರ್ಪನ್ನು […]
ಬ್ರಹ್ಮಾವರ: ರೋಟರ್ಯಾಕ್ಟ್ ಪದಾಧಿಕಾರಿಗಳ ತರಬೇತಿ ‘ಹೊಂಗನಸು’ – 2024
ಬ್ರಹ್ಮಾವರ: ರೋಟರಿ ಜಿಲ್ಲೆ 3182 ಇದರ ರೋಟರಾಕ್ಟ್ ಕ್ಲಬ್‌ಗಳ ಪದಾಧಿಕಾರಿಗಳ ತರಬೇತಿ ಕಮ್ಮಟ ‘ಹೊಂಗನಸು-2024’ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ರೋಟರಾಕ್ಟ್ ಕ್ಲಬ್ ಬ್ರಹ್ಮಾವರ ಆತಿಥ್ಯದಲ್ಲಿ ಬ್ರಹ್ಮಾವರದ ರೋಟರಿ ಸಮಾಜ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ರೋಟರಿ ಗವರ್ನರ್ ಸಿ.ಎ. ದೇವಾನಂದ್ ಉದ್ಘಾಟಿಸಿ ಮಾತನಾಡಿರೋಟರಾಕ್ಟ್ ಸದಸ್ಯರು ಭವಿಷ್ಯದ ನಾಯಕರು ಅವರು ತರಬೇತಿ ಮೂಲಕ ಕೌಶಲ ಹೆಚ್ಚಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿ ನಿಯೋಜಿತ ಗವರ್ನರ್ ಬಿ. ಎಂ. ಭಟ್ ಮಾತನಾಡಿ ಹೊಸ ರೋಟರಾಕ್ಟ್ ಕ್ಲಬ್‌ಗಳನ್ನು ಪ್ರಾಯೋಜಿಸುವಂತೆ ರೋಟರಿ ಕ್ಲಬ್‌ಗಳು ಕಾರ್ಯಪ್ರವೃತ್ತರಾಗಬೇಕು […]
ಉಡುಪಿ: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ಸೂಕ್ತ ತನಿಖೆ ನಡೆಸಿ: ರಮೇಶ್ ಕಾಂಚನ್ ಆಗ್ರಹ
ಉಡುಪಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ತನಿಖೆ ನಡೆಸಿ ದೇಶದ ಜನತೆಗೆ ಸತ್ಯ ತಿಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ದೇಶದಲ್ಲಿ ದೊಡ್ಡ ಮಟ್ಟದ ಕೋಲಾಹಲಕ್ಕೆ ಹಾಗೂ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವಂತ ವಿಚಾರ ಚರ್ಚೆಯಾಗುತ್ತಿದ್ದು ಕಳೆದ ಎರಡು ಅವಧಿಯಲ್ಲಿ ಎನ್.ಡಿ.ಎ ಮಿತ್ರಪಕ್ಷವಾಗಿರುವ ವೈ.ಎಸ್.ಆರ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದ […]
ಉಡುಪಿ:ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ
ಉಡುಪಿ:ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ “ಪದವಿಪ್ರದಾನ” ಸಮಾರಂಭವು ದಿನಾಂಕ 22 ಸಪ್ಟೆಂಬರ್ 2024 ಭಾನುವಾರದಂದು ಕಾಲೇಜಿನ ಆವರಣದಲ್ಲಿ ನಡೆಯಿತು. ಶ್ರೀ ಲಕ್ಷ್ಮೀಪತಿ ಭಟ್, ಹಿರಿಯ ಉಪಾಧ್ಯಕ್ಷರು, ಗ್ಲೋಬಲ್ ಮಾರ್ಕೆಟಿಂಗ್ ಆ್ಯಂಡ್ ಕಮ್ಯುನಿಕೇಶನ್ಸ್, ರೋಬೊಸಾಫ್ಟ್ ಟೆಕ್ನಾಲಜೀಸ್ ಇವರು ಪದವಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಮ್ಮ ಪದವಿ ಪ್ರದಾನಉಪನ್ಯಾಸದಲ್ಲಿ ಮಾತನಾಡಿದ ಇವರು ಒಂದು ಉತ್ತಮ ಯೋಜನೆ ಇದ್ದರೆ ಸಾಲದು ಅದರ ಜೊತೆಗೆ ಯೋಜನೆಯನ್ನು ಕಾರ್ಯಗತಗೊಳಿಸಲು ಬೇಕಾದಕಾರ್ಯಕ್ಷಮತೆ ಹೊಂದಿರಬೇಕು. ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಅನುದಿನವೂ […]
ಉಡುಪಿ ಕೃಷಿ ಯಾಂತ್ರೀಕರಣ ಯೋಜನೆ : ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪ.ಜಾ ಮತ್ತು ಪ,ಪಂ. ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿ ಯನ್ನು […]