ಉಡುಪಿ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ
ಉಡುಪಿ: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರುವಿಶ್ವವಿದ್ಯಾನಿಲಯ, ಯುವ ರೆಡ್ ಕ್ರಾಸ್ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ವಿಶ್ವ ಶಾಂತಿದಿನದ ಅಂಗವಾಗಿ ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾವು ಶನಿವಾರ ಸಂತೆಕಟ್ಟೆ ಬಸ್‌ಸ್ಟ್ಯಾಂಡ್ ನಿಂದ ಹೊರಟುಅಂಬಾಗಿಲು ಮೂಲಕ ಅಮೃತ್ ಗಾರ್ಡನ್‌ನಲ್ಲಿ ಸಮಾಪನಗೊಂಡಿತು. ಭಾರತೀಯ ರೆಡ್ ಕ್ರಾಸ್ […]
ಉಡುಪಿ: ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ
ಉಡುಪಿ:ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ,ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, […]
ಉಡುಪಿ ಕಿರು ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ: ಬೀದಿ ಬದಿ ವ್ಯಾಪಾರಸ್ಥರ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರಕಾರವು ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿ ಮತ್ತು ವ್ಯಾಪಾರ ಪುನರ್‌ಸ್ಥಾಪಿಸುವ ಸಲುವಾಗಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ” ಕಿರು ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಉಡುಪಿ ನಗರಸಭಾ ಪ್ರದೇಶದಲ್ಲಿ ಬೀದಿ ವ್ಯಾಪಾರಿಗಳಾಗಿ ತೊಡಗಿಸಿಕೊಂಡು ಗುರುತಿಸಲ್ಪಟ್ಟ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಯು ಪ್ರಥಮ ಹಂತದಲ್ಲಿ ರೂ. 10,000, 2ನೇ ಹಂತದಲ್ಲಿ ರೂ. 20,000 ಮತ್ತು 3ನೇ […]
ಉಡುಪಿ ಕಮ್ಮಟ : ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ “ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಅಕ್ಟೋಬರ್ ಕೊನೆಯ ವಾರದಲ್ಲಿ ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 45 ವರ್ಷ ವಯೋಮಿತಿಯ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅಕ್ಟೋಬರ್ 08 […]
ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ
ಉಡುಪಿ: ಕಡಲ ತೀರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಜಲಚರಗಳ ಅಸ್ತಿತ್ವಕ್ಕೆತೊಂದರೆಯಾಗುತ್ತಿದೆ. ಈ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಡಲ ತೀರ ಸ್ವಚ್ಛತಾ ದಿನವನ್ನು ಆಚರಿಸಲಾಗುತ್ತಿದ್ದು,ಸಾರ್ವಜನಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶನಿವಾರ ಕುಂದಾಪುರ ತಾಲೂಕಿನ ಕೋಡಿ ಸಮುದ್ರ ತೀರದಲ್ಲಿ ಅಂತರಾಷ್ಟ್ರೀಯ ಕಡಲ ತೀರ ಸ್ವಚ್ಚತಾ ದಿನದ ಅಂಗವಾಗಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಪರಿಸರ ಇಲಾಖೆ ಮತ್ತು ಕುಂದಾಪುರ ಪುರಸಭೆ ಆಶ್ರಯದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ದಿನ […]