ತಿರುಪತಿಗೆ ತೆರಳುವ ನಂದಿನಿ ತುಪ್ಪ ಟ್ಯಾಂಕರ್‌ಗಳಿಗೆ ಜಿಪಿಎಸ್, ಎಲೆಕ್ಟ್ರಿಕ್ ಲಾಕಿಂಗ್ ಅಳವಡಿಕೆ.
ಬೆಂಗಳೂರು: ತಿರುಪತಿ ಲಡ್ಡು ವಿವಾದದ ಬಳಿಕ ಕೆಎಂಎಫ್ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ತಿರುಮಲಕ್ಕೆ ಕಳುಹಿಸುವ ತುಪ್ಪದ ಟ್ಯಾಂಕರ್‌ಗಳಿಗೆ ಜಿಪಿಎಸ್, ಎಲೆಕ್ಟ್ರಿಕ್ ಲಾಕಿಂಗ್ ಅಳವಡಿಸಲು ಮುಂದಾಗಿದೆ. ಈ ಹಿಂದೆ ವಾರಕ್ಕೆ ಮೂರು ಟ್ಯಾಂಕರ್‌ಗಳನ್ನ ಆಮದು ಮಾಡಿಕೊಳ್ಳಲಾಗುತ್ತಿತ್ತು. ಒಟ್ಟಾರೆ 3 ತಿಂಗಳಿಗೆ 350 ಟನ್ ತುಪ್ಪ ನೀಡುವಂತೆ ಕೆಎಂಎಫ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹಿಂದೆ ಟಿಟಿಡಿ ಮಾಡಿಕೊಂಡ […]
ಇಂದು ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.
ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೆ.23) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ ಗಳಲ್ಲಿ ಪ್ರತ್ಯೇಕ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗಲಿದೆ.ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಜಿಲ್ಲೆ ಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು […]