ಮಣಿಪಾಲ MSDCಯಲ್ಲಿ “ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್” ಅಲ್ಪಾವಧಿ ಕೋರ್ಸ್
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ವಿದ್ಯಾರ್ಥಿಗಳಿಗೆ ‘ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್’ ಅಲ್ಪಾವಧಿ ಕೋರ್ಸ್’ಗೆ ಆರ್ಜಿ ಅಹ್ವಾನಿಸಲಾಗಿದೆ. ಪ್ರಯೋಜನಗಳು: ಕೋರ್ಸ್ ಅವಧಿಯು 1 ವಾರ (15ಗಂಟೆ) ಆಗಿದ್ದು, ಈ ಕೋರ್ಸಿಗೆ ಶೇಕಡ 50ರಷ್ಟು ರಿಯಾಯಿತಿ ಇರಲಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯಿಇವೆ. ಸಂಪರ್ಕಿಸಿ:📞ಫೋನ್: 8123163934/8123163935🌐ವೆಬ್‌ಸೈಟ್: https://msdcskills.org📍ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಎಲೆಕ್ಟ್ರಿಕ್ ವೆಹಿಕಲ್, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಮಿಲ್ಕ್ ಡೈರಿ ರಸ್ತೆ, ಮಣಿಪಾಲ
ದೇಶದ ವಿರೋಧ ಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ
ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ […]
ಜನತಾ ಪದವಿಪೂರ್ವ ಕಾಲೇಜಿನ ರಿಮೇಶ್ ರಾಜ್ಯ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಕ್ಕೆ ಆಯ್ಕೆ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕ್ವಾಯಿಟ್ ಪಂದ್ಯದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಶಿರ್ವ: ಕಾಲೇಜು ವಿದ್ಯಾರ್ಥಿ ನಾಪತ್ತೆ.
ಶಿರ್ವ: ಆನಂದತೀರ್ಥ ಕಾಲೇಜಿನಲ್ಲಿ 2ನೇ ವರ್ಷದ ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದು ಕಟ್ಟಿಂಗೇರಿ ಗ್ರಾಮದ ಧನುಷ್ ಜಿ (20) ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ. ಸೆ.23 ರಂದು ಬೆಳಿಗ್ಗೆ 7.00 ಗಂಟೆಗೆ ಮನೆಯಿಂದ ಹೊರಟು ಹೋಗಿದ್ದು ಸಂಜೆ 7.00 ಯಾದರೂ ವಾಪಾಸು ಮನೆಗೆ ಬಂದಿರುವುದಿಲ್ಲ. ಈತನ ಬಗ್ಗೆ ಆತನ ಸ್ನೇಹಿತರಲ್ಲಿ ಸಂಬಂದಿಕರಲ್ಲಿ ವಿಚಾರಿಸಿ ಈ ವರೆಗೂ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲ. ವಿದ್ಯಾರ್ಥಿ ಟೀ ಶರ್ಟ ಮತ್ತು ಜೀನ್ಸ್ ಪ್ಯಾಂಟ್ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಹಿಂದಿ ಭಾಷೆ ಮಾತಾಡುತ್ತಿದ್ದು, 5.8 ಅಡಿ […]
ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶ ಕೈಬಿಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಧರಣಿ
ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಧರಣಿ ನಡೆಸಿದರು. ಸಾವಿರಾರು ಸಂಖ್ಯೆ ಸೇರಿದ್ದ ಜನರು ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕ ವರದಿಯಿಂದಾಗಿ ಜನವಸತಿ ಪ್ರದೇಶಗಳು ಪರಿಸರ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ […]