ಕೆಎಸ್ಸಾರ್ಟಿಸಿ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ನವದುರ್ಗ ದರ್ಶನ ವಿಶೇಷ ಪ್ಯಾಕೇಜ್.

ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ‌ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರುಡೇಶ್ವರಕ್ಕೆ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ. ನವದುರ್ಗ ದರ್ಶನ:ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ- ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ- ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಸಸಿಹಿಷ್ಣು ಶ್ರೀ ಭಗವತಿ […]

ಉಡುಪಿ:ಮನೆಯಿಂದಲೇ ಕುಳಿತು ಕೆಲಸ ಮಾಡಿ

ವ್ಯಾಪಾರ ಅಥವಾ ಉದ್ಯಮದಾರರಿಗೆ ಉತ್ತಮ ಅವಕಾಶ ಉಡುಪಿ:ಅರೆಕಾಲಿಕ(part time) ಅಥವಾ ಪೂರ್ಣ ಸಮಯ(full time) ಕೆಲಸ ಮಾಡಿ ಮತ್ತು ಹೆಚ್ಚು ಆದಾಯವನ್ನು ಗಳಿಸಿ. 18 ವರ್ಷ ಮತ್ತು ಮೇಲ್ಪಟ್ಟವರು ಈ ಕೆಲಸವನ್ನು ಮಾಡಬಹುದು ದಿನಕ್ಕೆ ಒಂದರಿಂದ ನಾಲ್ಕು ಗಂಟೆಗಳ ಕಾಲ ಕೆಲಸ ಮಾಡಿ, ತರಬೇತಿ ಮತ್ತು ಬೆಂಬಲವನ್ನು ಒದಗಿಸಲಾಗುತ್ತದೆ. ನೌಕರರು, ಗೃಹಿಣಿಯರು, ವಿದ್ಯಾರ್ಥಿಗಳು, ನಿವೃತ್ತ ವ್ಯಕ್ತಿಗಳು, ಉದ್ಯಮಿ ವೃತ್ತಿಪರರು ಎಲ್ಲರೂ ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಬಹುದು. https://docs.google.com/forms/d/e/1FAIpQLSd4cz9jAD0nBxWqci3gUFTEQ4AC58s0JC0dKdgsk1uKZCGdtw/viewform?vc=0&c=0&w=1&flr=0

ಶಿರಿಯಾರ: ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಬ್ರಹ್ಮಾವರ ತಾಲೂಕಿನ ಶಿರಿಯಾರ ನೈಲಾಡಿಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಇಂದು ಮುಂಜಾನೆ ನಡೆದಿದೆ. ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತು ಕೊಂಡು ಹೋಗಿದ್ದು, ಇದನ್ನು ಕಂಡು ಮನೆಯವರು ಭಯಭೀತರಾಗಿದ್ದಾರೆ. ಚಿರತೆ ಬಂದು ನಾಯಿಯನ್ನು ಹೊತ್ತುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಹಿಂದಿನಿಂದಲೂ ಚಿರತೆ ಕಾಟ ವಿಪರೀತ ಆಗಿದ್ದು ಈ ಘಟನೆಯಿಂದ ಜನರಲ್ಲಿ ಭೀತಿ ಹುಟ್ಟಿಸಿದೆ. […]

ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್‌ ಅವರ ಮೃತದೇಹ ಬುಧವಾರ(ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ. ಕಳೆದ 6 ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್‌ ಅವರ ಬೆಂಜ್ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ ಪತ್ತೆಯಾಗಿದೆ ಎಂದು ಕಾರ್ಯಾಚರಣೆಯ ತಂಡದ ಮೂಲಗಳು ತಿಳಿಸಿವೆ. ಲಾರಿಯ ಮಾಲೀಕ ಮನಾಫ್‌ ಅವರು ಇದು ತಮ್ಮದೆ ಲಾರಿಯೆಂದು ಗುರುತಿಸಿದ್ದು, […]

ಮುಡಾ ಹಗರಣ: ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ‌ಕೋರ್ಟ್ ಆದೇಶ.

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ […]