ಸೆ.29ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’
ಉಡುಪಿ: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮವನ್ನು ಇದೇ ಸೆ.29ರಂದು ಪಡುಬಿದ್ರಿ ಬಂಟರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ […]
ಭಾರತದ ಯಾವುದೇ ಭಾಗವನ್ನು ‘ಪಾಕಿಸ್ತಾನ’ ಎಂದು ಕರೆಯುವಂತಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ನ್ಯಾಯಾಲಯದ ಕಲಾಪದಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ. ಇದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ಕಲಾಪದ ಎರಡು ವೀಡಿಯೊ ತುಣುಕುಗಳು ವೈರಲ್ ಆಗಿತ್ತು. ಸೆಪ್ಟೆಂಬರ್ […]
ಮಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಮಹಿಳೆ.
ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಗ್ಗೆ ನಗರದ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ. ಶಬರಿ ಎನ್ನುವಾತ ಪೊಲೀಸ್ ವಶವಾದವನು. ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಈತ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಮಂಗಳೂರು: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.
ಮಂಗಳೂರು: ಮಹಿಳೆಯ ದೇಹ 29 ತುಂಡು ಮಾಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರದಂದು ತೀರ್ಪು ನೀಡಿದ್ದಾರೆ. ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್ ಆಲಿಯಾಸ್ ಜೋನಸ್ ಜೌಲಿನ್ ಸ್ಯಾಮ್ಸನ್ (35) ಮತ್ತು ವಿಕ್ಟೋರಿಯಾ ಮಥಾಯಿಸ್ (47) ಜೀವಾವಧಿ ಶಿಕ್ಷೆಗೊಳಗಾಗದವರು.ಪ್ರಕರಣದ ಇನೋರ್ವ ಆರೋಪಿ ರಾಜು (34) ಎಂಬಾತನಿಗೆ ಆರೂವರೆ ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನಗರದ 2019ರ ಮೇ 11ರಂದು […]
ಉಡುಪಿ:ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯಕ್ರಮ
ಉಡುಪಿ: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2024 ಹಾಗೂ ಪೌರಕಾರ್ಮಿಕರ ಸಾಮಾನ್ಯ ಆರೋಗ್ಯ ತಪಾಸಣಾ ಕಾರ್ಯಕ್ರಮವು ಮಂಗಳವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್ ಮಾತನಾಡಿ, ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುತ್ತಿರುವ ಹಿನ್ನೆಲೆ, ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಅವರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. […]