ಬೈಂದೂರು: ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು
ಉಡುಪಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬೈಂದೂರು ತಾಲೂಕಿ ಯಡ್ತರೆಯ ಸೇನೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ […]
ಸಿದ್ಧರಾಮಯ್ಯ ಅವರಿಗೆ ಜವಾಬ್ದಾರಿ ಮತ್ತು ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ.- ಶ್ರೀನಿಧಿ ಹೆಗ್ಡೆ.
ಉಡುಪಿ:ಸಂವಿದಾನ, ಕಾನೂನು, ನೈತಿಕತೆ, ಭ್ರಷ್ಟಚಾರದ ವಿರೋಧದ ಕುರಿತು ಮಾತನಾಡುವ ಸಿದ್ದರಾಮಯ್ಯ ಅವರು ಈ ಕ್ಷಣವೇ ರಾಜೀನಾಮೆ ನೀಡಬೇಕು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಯನ್ನು ಕಿತ್ತೆಸೆಯುವ ಮೂಲಕ ಹೈಕೋರ್ಟ್ ಸಿದ್ಧರಾಮಯ್ಯ ಅವರ ವಿರುದ್ಧ ತನಿಖೆಗೆ ಹಸಿರು ನಿಶಾನೆ ನೀಡಿದೆ. ಸಿದ್ಧರಾಮಯ್ಯ ಇನ್ನಾದರೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ತಮ್ಮ ಅತೀ ಭಂಡತನ ಪ್ರದರ್ಶನ ಮಾಡದೆ ರಾಜೀನಾಮೆ ನೀಡಿ ತಮ್ಮ ಸ್ಥಾನದ ಗೌರವ ಉಳಿಸಿಕೊಳ್ಳಲಿ. ಸಿಎಂ […]
ಕಾರ್ಕಳ: ಅಪರಿಚಿತ ವ್ಯಕ್ತಿಗಳಿಂದ ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ: ಪ್ರಕರಣ ದಾಖಲು
ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ ಎಂಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿ ಹಣ ತೆಗೆಯಲು ಹೋದಾಗ ಎರಡು ಜನ ಅಪರಿಚಿತ ವ್ಯಕ್ತಿಗಳಿದ್ದು, ಅವರು ಸಮೀನಾ ಅವರ ಗಮನವನ್ನು ಬೇರೆ ಕಡೆ ಸೆಳೆದು ಅವರ ಗಮನಕ್ಕೆ ಬಾರದಂತೆ ಎಟಿಎಂ ಕಾರ್ಡ್ ಬದಲಾವಣೆ ಮಾಡಿದರೆನ್ನಲಾಗಿದೆ. […]
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ
ಉಡುಪಿ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಇಂದು ಧರಣಿ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಧರಣಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನಾಡಿನ ಜನತೆ ಬಗ್ಗೆ ಗೌರವ […]
ಉಡುಪಿ: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಆಲ್ಟೋ ಕಾರಿನಲ್ಲಿ ಬೆಂಕಿ.
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್’ನ ಎದುರು ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಅವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.