ಮೂಲಭೂತ ಸೌಲಭ್ಯ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಮುಷ್ಕರ
ಉಡುಪಿ: ಸುಸಜ್ಜಿತವಾದ ಕಚೇರಿ, ಗುಣಮಟ್ಟದ ಪೋನ್, ಸಿಯುಜಿ ಸಿಮ್, ಡೇಟಾ ಸಹಿತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜಿಲ್ಲೆಯ ಏಳು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಎಲ್ಲ ಬಗೆಯ ಮೊಬೈಲ್ ಮತ್ತು ಅಪ್ಲಿಕೇಶನ್ ಸೇವೆಗಳನ್ನು ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಉಡುಪಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಉಡುಪಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.ಉಡುಪಿ ತಾಲೂಕು ಗ್ರಾಮ […]
ಕೊಲ್ಲೂರು: ಖಾಸಗಿ ಬಸ್- ಪಿಕ್ ಅಪ್ ವಾಹನ ಮಧ್ಯೆ ಭೀಕರ ಅಪಘಾತ
ಉಡುಪಿ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಮೆಣಸು ಸಾಗಾಟದ ಪಿಕ್ ನಡುವೆ ಅಪಘಾತ ನಡೆದ ಪರಿಣಾಮ ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಕೊಲ್ಲೂರು ಇಡೂರು ಕುಂಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ನಡೆದಿದೆ. ಕೊಲ್ಲೂರಿನಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕ್ ಆಫ್ ವಾಹನ ಹಾಗೂ ಕುಂದಾಪುರ ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. […]
ಮಂಗಳೂರು:ಎನ್‌ಡಿಎ ಪ್ರವೇಶ ಪರೀಕ್ಷೆ ಎಕ್ಸ್ಪರ್ಟ್ನ 20 ವಿದ್ಯಾರ್ಥಿಗಳು ತೇರ್ಗಡೆ
ಮಂಗಳೂರು:ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಲಿಖಿತಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 20 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದೊಂದು ರಾಷ್ಟ್ರಮಟ್ಟದ ಅಭೂತಪೂರ್ವ ಸಾಧನೆಯಾಗಿದೆ. ಆಶಿಶ್ ಸಿದ್ದಣ್ಣ ಹಾವನ್ನವರ್, ಭುವನ್ ಜಿ., ಚಂದ್ರಹಾಸ ಪ್ರಾಂಜಲ್ ಎಸ್.ಜಿ., ಧೀರೆನ್ ಎ.ಶೆಟ್ಟಿ, ಗೋಕುಲ್ ಜಿ.ಎಸ್., ಕರಣ್ ನೇಕರ್, ಕ್ರಿಶ್ ಎಸ್.,ಕುಶಾಲ್ ಹಟ್ಟಿ, ಲಕ್ಷ್ಯ ಎಲ್. ಪೂಜಾರ್, ಮನ್ವಿತ್ ಎಸ್., ನಿಖಿಲ್ ಸೊನ್ನದ್,ಪೂಜಾ, ಪ್ರಜ್ವಲ್ ಭಟ್, ಪ್ರಣವ್ ಎಂ.ಮಾರಮನ್ನವರ್, ಪ್ರಣವ್ ಎಂ.ಪಿ.,ಪ್ರೀತಂ […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಎರಡನೇ ವರ್ಷಕ್ಕೆ ಪಾದರ್ಪಣೆ.
ಉದ್ಯಾವರ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟ್ ಉದ್ಯಾವರದಮಕ್ಕಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಯುತ ಜೀವನ್ ಡಿಸೋಜವರುಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ.ಫಾ.ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ […]
ಸೆ.29ರಂದು ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭ
ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್‌ನ 20ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವು ಇದೇ ಸೆ.29ರಂದು ಬೆಳಿಗ್ಗೆ 9ರಿಂದ ಸಂಜೆ 4.30ರ ವರೆಗೆ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದರು. ಉಡುಪಿ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ […]