ಹೊಳೆಯಲ್ಲಿ ಈಜಿ ಊರಿಗೆ ಕರೆಂಟ್ ಕೊಟ್ಟ ಪವರ್ ಮ್ಯಾನ್
ಉಡುಪಿ: ಹೊಳೆಯಲ್ಲಿ ಸುಮಾರು 70 ಅಡಿ ದೂರದವರಗೆ ಈಜಾಡುತ್ತಾ ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಮನೆಗೆ ವಿದ್ಯುತ್ ಸಂಪರ್ಕ ನೀಡಿದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಿವಪುರ ಗ್ರಾಮದ ಉಪ್ಪಳ ಮೂರು ಸಾಲು ಹೊಳೆಯ ಮಧ್ಯದಲ್ಲಿ ಹಾದುಹೋದ ವಿದ್ಯುತ್ ತಂತಿ ತುಂಡಾಗಿ ಹಲವಾರು ದಿನಗಳು ಕಳೆದಿತ್ತು. ವಿಪರೀತ ಮಳೆಯಿಂದಾಗಿ ದುರಸ್ತಿ ಮಾಡಲಾಗದೆ ಹಾಗೆ ಉಳಿದಿತ್ತು. ಈ ಪರಿಸರದ ಜನ ವಿದ್ಯುತ್ ಮೋಟರ್ ಗಳನ್ನು ಬಳಸಲಾಗದೆ ಸಮಸ್ಯೆಯನ್ನು ಎದುರಿಸುತ್ತಿದ್ದರು. ಈ ವಿಷಯ ತಿಳಿದ […]
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತಪಟ್ಟ ಪ್ರಕರಣ: ಕ್ಲಿನಿಕ್‌ಗೆ ಬೀಗ, ಡಿಎಚ್ಒ ನೇತೃತ್ವದಲ್ಲಿ ತನಿಖೆಗೆ ಸಮಿತಿ.
ಮಂಗಳೂರು: ಎದೆಯ ಮೇಲಿನ ಗುಳ್ಳೆಯ ಹಿನ್ನೆಲೆಯಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿಯಲ್ಲಿರುವ “ಫ್ಲಾಂಟ್” ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್‌ಗೆ ಆರೋಗ್ಯ ಅಧಿಕಾರಿಗಳು ಬೀಗ ಜಡಿದಿದ್ದಾರೆ. ವೈದ್ಯರ ನಿರ್ಲಕ್ಷ್ಯ ವೇ ಕಾರಣ:ಈ ಕ್ಲಿನಿಕ್‌ಗೆ ಕಾಸ್ಮೆಟಿಕ್ ಸರ್ಜರಿಗೆಂದು ಉಳ್ಳಾಲದ ಮುಹಮ್ಮದ್ ಮಾಝಿನ್ ತೆರಳಿದ್ದರು. ಆದರೆ ಸರ್ಜರಿ ವೇಳೆ ಮಾಝಿನ್ ಮೃತಪಟ್ಟಿದ್ದ. ಯುವಕನ ಮರಣಕ್ಕೆ ಕ್ಲಿನಿಕ್‌ನ ವೈದ್ಯರ ನಿರ್ಲಕ್ಷ್ಯ ವೇ ಕಾರಣವೆಂದು ಮಾಝಿನ್ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ […]
ಅ.3ರಿಂದ 12ರ ವರೆಗೆ ಉಡುಪಿ-ಉಚ್ಚಿಲ ದಸರಾ
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮೂರನೇ ವರ್ಷದ “ಉಡುಪಿ-ಉಚ್ಚಿಲ ದಸರಾ-2024” ಕಾರ್ಯಕ್ರಮವು ಅಕ್ಟೋಬರ್ 3ರಿಂದ 12ರ ವರೆಗೆ ಶ್ರೀಮತಿ ಶಾಲಿನಿ ಡಾ| ಜಿ. ಶಂಕರ್ ಸಭಾಂಗಣದಲ್ಲಿ ಜರಗಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ| ಜಿ. ಶಂಕರ್ ಹೇಳಿದರು. ಉಚ್ಚಿಲ ಮೊಗವೀರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10 ದಿನಗಳ […]
ಬೆಂಗಳೂರು ಮಹಾಲಕ್ಷ್ಮೀ ಭೀಕರ ಹತ್ಯೆ ಪ್ರಕರಣ: ಹಂತಕನ ಡೆತ್ ನೋಟ್’ನಲ್ಲಿ ಕೊಲೆ ರಹಸ್ಯ ಬಯಲು..!
ಬೆಂಗಳೂರು ಸೆ.26: ನಗರದ ವೈಯಾಲಿಕಾವಲ್ ನ ಪೈಪ್ ಲೈನ್ ರಸ್ತೆಯ ಮನೆಯೊಂದರ ಫ್ರಿಡ್ಜ್ ನಲ್ಲಿ ಸೆ.21ರಂದು ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಇಡಲಾಗಿತ್ತು. ಈ ಪ್ರಕರಣ ಕೈಗೆತ್ತಿಕೊಂಡ ವೈಯಾಲಿಕಾವಲ್ ಪೊಲೀಸರು ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದರು. ಆದರೆ ಆರೋಪಿಯ ಪತ್ತೆ ಮಾಡಲು ಹೊರ ರಾಜ್ಯಕ್ಕೆ ಹೋದ ಪೊಲೀಸರಿಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ. ಜೊತೆಗೆ ಡೆತ್ ನೋಟ್ ಪತ್ತೆಯಾಗಿದೆ. ಈ ಡೆತ್ ನೋಟ್ನಲ್ಲಿ ತಾನೇ […]
ಉಡುಪಿ ಶ್ರೇಷ್ಠ ಕೃಷಿಕ ಪ್ರಶಸ್ತಿ : ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ, ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ ಹಾಗೂ ಕನಿಷ್ಠ ಒಂದು ಎಕರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು […]