ಉಡುಪಿ: ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ
ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು.ಭೌತಿಕವಾಗಿ ಮತ್ತು ಬೌದ್ಧಿಕವಾಗಿ […]
ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವೀಡಿಯೋ ಕಾನ್ಸ್ರೆನ್ಸ್ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆ ಕುರಿತ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಯುವಜನತೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ […]
ಉಡುಪಿ:ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ : ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್
ಉಡುಪಿ: ಬ್ಯಾಂಕ್‌ಗಳ ಮ್ಯಾನೆಜರ್ ಗಳು ಹಾಗೂ ಸಿಬ್ಬಂದಿಗಳು ಜನಸಾಮಾನ್ಯರೊಂದಿಗೆ ಬ್ಯಾಂಕಿನವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟುಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಕೃತ ಬ್ಯಾಂಕುಗಳ ಹೆಸರು ಹಾಗೂ ಸ್ಥಳಗಳನ್ನು ಬ್ಯಾಂಕುಗಳ ಬೋರ್ಡುಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಬೇಕು.ಗ್ರಾಹಕರೊಂದಿಗೆ […]
ಕುಂದಾಪುರ: ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೆ.23 ರಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಕ್ರಮವಾಗಿ-ವಿಘ್ನೇಶ್,ರತನ್,ರಿತೇಶ್, ನವಾಜ್,ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ […]
ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ.
ಪೆರ್ಡೂರು: ಪೆರ್ಡೂರು ಬಂಟರ ಸೌಹಾರ್ದ ಸಹಕಾರಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಶ್ರೀಮತಿ ಸರ್ವಾಣಿ ಪಲ್ಲಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನ ಪೆರ್ಡೂರಿನಲ್ಲಿ ನಡೆಸಲಾಯಿತು. ಮುಂದಿನ ಸಾಲಿನ ಮಹಾಸಭೆಯಲ್ಲಿ ಮೊದಲು ಸಹಕಾರಿಯ ಶಾಖೆಗಳನ್ನು ವಿಸ್ತರಿಸಲಾಗುವುದೆಂದು ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಶಾಂತರಾಮ ಸೂಡ ಅವರು ಹೇಳಿದರು. ಈ ಸಂದರ್ಭದಲ್ಲಿ ಶೇ.10 ಡಿವಿಡೆಂಟ್ ಘೋಷಿಸಿದರು. ರೂ.6 ಲಕ್ಷದಷ್ಟು ವಿದ್ಯಾರ್ಥಿ ವೇತನ, ವಸತಿ, ಆರೋಗ್ಯ ವಿಚಾರದಲ್ಲಿ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷರಾದ ಸುಧಾಕರ […]