ಎಂ ಐ ಟಿ ಕುಂದಾಪುರದಲ್ಲಿ ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನೆ.

ಕುಂದಾಪುರ: ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮವನ್ನು ಇತ್ತೀಚೆಗೆ ಎಂ.ಐ.ಟಿ ಕಾಲೇಜಿನಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನೀವಿಯಸ್ ಸೊಲ್ಯುಶನ್ ಪ್ರೈವೇಟ್ ಲಿಮಿಟೆಡ್ನನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆದ ಶ್ರೀಯುತ ಸುಯೋಗ್ ಶೆಟ್ಟಿ ಇವರು ಪ್ರಥಮ ವರ್ಷದ ತಾಂತ್ರಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ, ತಾಂತ್ರಿಕ ತರಬೇತಿಯ ಬಗ್ಗೆ ಕುತೂಹಲ ಇರಬೇಕು, ವಿದ್ಯಾರ್ಥಿ ಜೀವನದಲ್ಲಿ ಎದುರಿಸಬೇಕಾದ ಸವಾಲುಗಳನ್ನು ಹಾಗೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಮುಂದಿನ ನಾಲ್ಕು ವರ್ಷ ಕಲಿಕೆಯಲು ಗಮನ ಹರಿಸಬೇಕೆಂದು ಕರೆಕೊಟ್ಟರು. ಗೌರವ ಅತಿಥಿಗಳಾಗಿ ಆಗಮಿಸಿದ […]

ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ: ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಗೌರವಾರ್ಪಣೆ.

ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಸೆಪ್ಟೆಂಬರ್ 22 ಗುರುವಾರದಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ನಿರ್ದೇಶಕರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸೊಸೈಟಿಯ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಜಾನಪದ ಕ್ಷೇತ್ರ, ನಾಟಕ ಕ್ಷೇತ್ರ, ಯಕ್ಷಗಾನ […]

ಕಾರ್ಕಳ: ಎಟಿಎಂ ಕಾರ್ಡ್ ಅನ್ನು ಬದಲಾಯಿಸಿ ಒಂದು ಲಕ್ಷ ರೂ. ವಂಚನೆ ಪ್ರಕರಣ: ಮೂವರು ಆರೋಪಿಗಳ ಬಂಧನ.

ಕಾರ್ಕಳ: ಎಟಿಎಂ ಕಾರ್ಡ್ ಅನ್ನು ಬದಲಾಯಿಸಿ ಒಂದು ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ಪ್ರಕರಣವನ್ನು ಭೇದಿಸಿ ಮೂವರು ಅಂತರರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು, ಮಹಾರಾಷ್ಟ್ರ ಸೋಲಾಪುರದ ಕೇದಾರನಾಥ ನಗರದ ಶ್ರವಣ್ ಸತೀಶ ಮಿನಜಗಿ(27), ಸೋಲಾಪುರ ತಾಲೂಕಿನ ಕುಮ್ಮಾನಗರದ ಇಂದಿರಾ ನಗರದ ಪ್ರದೀಪ ಮಾರುತಿ ಇಂಗ್ಲೆ(27), ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ವನಗಲ್ಲಿಯ ಕಿರಣ್ ಬಾಲು ಚೌಹಾನ್ (28). ನಾಲ್ಕನೆ ಆರೋಪಿ ಪತ್ತೆಗಾಗಿ ಅಜೆಕಾರು ಪೊಲೀಸರು ಬಲೆಬೀಸಿದ್ದಾರೆ. ಬಂಧಿತ ಮೂವರು […]

ಗಂಗೊಳ್ಳಿಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು.

ಕುಂದಾಪುರ: ಸೌದಿ ಅರೇಬಿಯಾದಲ್ಲಿ ಗಂಗೊಳ್ಳಿ ಮೂಲದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ. 25 ರಂದು ಬುಧವಾರ ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್ ಬಷೀರ್ (30) ಎಂದು ತಿಳಿದು ಬಂದಿದೆ. ಇವರು ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸೌದಿಯಲ್ಲಿ ಇರುವ ಸ್ಥಳೀಯ ಅನಿವಾಸಿ ಭಾರತೀಯರು ಹಾಗೂ ಗಂಗೊಳ್ಳಿಯಲ್ಲಿ ಇರುವ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. ಎರಡು […]

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ.

ಉಡುಪಿ: ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ನಾಪತ್ತೆಯಾದ ವಿದ್ಯಾರ್ಥಿನಿ ಮೂಡುಬೆಳ್ಳೆಯ ವಿವೇಕ್‌ ಪೈ ಅವರ ಪುತ್ರಿ ದಿಶಾ ಪೈ (19). ಉಡುಪಿಯ ಕಾಲೇಜಿನಲ್ಲಿ ಬಿಬಿಎ 2ನೇ ವರ್ಷದಲ್ಲಿ ಕಲಿಯುತ್ತಿದ್ದ ಈಕೆ ಸೆ. 23ರಂದು ಬೆಳಗ್ಗೆ ಮನೆಯಿಂದ ಕಾಲೇಜಿಗೆಂದು ಹೊರಟು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಆಕೆಯ ಮೊಬೈಲ್‌ ಕೂಡಾ ಸ್ವಿಚ್‌ ಆಫ್‌ ಆಗಿದ್ದು, ಅವಳ ಬಗ್ಗೆ ಸಹಪಾಠಿಗಳಲ್ಲಿ ವಿಚಾರಿಸಿದಾಗ ಆಕೆ ಸೋಮವಾರ ಕಾಲೇಜಿಗೆ ಬಂದಿಲ್ಲ ಎಂದು […]