ಡಾ.ಸುಶಿಲ್ ಜತ್ತನ್ನಗೆ ಮೈಲ್‌ಸ್ಟೋನ್ ಗ್ಲೋಬಲ್- IHW ಗ್ಲೋಬಲ್ ಲೀಡರ್ಸ್ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನಾ ಅವರಿಗೆ ಆರೋಗ್ಯ ಸೇವೆಗೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಮೈಲ್‌ಸ್ಟೋನ್ ಗ್ಲೋಬಲ್ ಪ್ರಶಸ್ತಿ ಮತ್ತು ಐಎಚ್‌ಡಬ್ಲ್ಯೂ ಗ್ಲೋಬಲ್ ಲೀಡರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ಅಜ್ಮಾನ್‌ನ ಬಾಹಿ ಅಜ್ಮಾನ್ ಪ್ಯಾಲೇಸ್ ಹೋಟೆಲ್‌ನಲ್ಲಿ ಸೆ.14ರಂದು ನಡೆದ ಸಮಾರಂಭದಲ್ಲಿ ಮೈಲ್‌ಸ್ಟೋನ್ ಗ್ಲೋಬಲ್ ಅವಾರ್ಡ್ಸ್ ಮತ್ತು ಕಾನ್‌ಕ್ಲೇವ್-2024 ಸಮಾರಂಭದಲ್ಲಿ ಡಾ.ಜತನ್ನಾ ಅವರಿಗೆ ಮೈಲ್‌ಸ್ಟೋನ್ ಗ್ಲೋಬಲ್ ಪ್ರಶಸ್ತಿ ಜೊತೆಗೆ ಅವರ ಆಸ್ಪತ್ರೆಗೆ ಚಿನ್ನದ ಪದಕ ಮತ್ತು ಶ್ರೇಷ್ಠತೆಯ […]

ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ..!

ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಆರೋಪಿಯ ಪತ್ತೆಗಾಗಿ ಬೆಂಗಳೂರು ಪೊಲೀಸರ ತಂಡ ಒಡಿಶಾಕ್ಕೆ ತೆರಳಿತ್ತು. ಸೆಪ್ಟೆಂಬರ್ 21 ರಂದು ಬೆಂಗಳೂರಿನ ವೈಯಾಲಿಕಾವಲ್ ಪ್ರದೇಶದ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಹತ್ಯೆಮಾಡಿ ಬಳಿಕ ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿ ಇಟ್ಟು ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ.