ಹೈಕೋರ್ಟ್ ತೀರ್ಪು “ರಾಜಕೀಯ ಪ್ರೇರಿತ” ಹೇಳಿಕೆ; ಸಚಿವ ಜಮೀರ್ ವಿರುದ್ಧ ಸಂಸದ ಕೋಟ ಆಕ್ರೋಶ

ಉಡುಪಿ: ಸಚಿವ ಜಮೀರ್ ಅಹಮದ್ ಅವರು ಸಿದ್ದರಾಮಯ್ಯ ಅಭಿಯೋಜನೆ ಕುರಿತು ಹೈಕೋರ್ಟ್‌ ನೀಡಿದ ತೀರ್ಪನ್ನು “ರಾಜಕೀಯ ಪ್ರೇರಿತ” ಎಂದು ಹೇಳಿದ್ದಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹೈಕೋರ್ಟ್ ನ್ಯಾಯಮೂರ್ತಿಗಳು ನೀಡಿದ ತೀರ್ಪನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಲೆಬಾಗಿ ಸ್ವೀಕಾರ ಮಾಡಬೇಕು. ಅದು ಇಷ್ಟವಿಲ್ಲದಿದ್ದರೆ ಮೇಲ್ಮನವಿ ಸಲ್ಲಿಸಬೇಕು. ಅದು ಬಿಟ್ಟು ಒಬ್ಬ ನ್ಯಾಯಮೂರ್ತಿಯ ತೀರ್ಪನ್ನು ಟೀಕೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದು ಹೇಳಿದವರ […]

ಉಡುಪಿ:ಸಮಾಜದಲ್ಲಿನ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶಕ್ತಿವಂತರಾಗಿ: ನ್ಯಾ. ಕಿರಣ್ ಎಸ್ ಗಂಗಣ್ಣವರ್

ಉಡುಪಿ: ಸಮಾಜದಲ್ಲಿನ ಅಸ್ಥಿರತೆಯಿಂದಾಗಿ ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿದ್ದು, ಅವುಗಳನ್ನು ಎದುರಿಸಿ, ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಯುವಜನತೆ ಶಕ್ತಿವಂತರಾಗಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರಕ್ಷಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ […]

ಉಡುಪಿ:ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ […]

ಮಣಿಪಾಲ MSDCಯಲ್ಲಿ “ಮರದ ಕೆಲಸ” ಕುರಿತು ಮೂರು ತಿಂಗಳ ಕೌಶಲ್ಯ ತರಬೇತಿ.

ಮಣಿಪಾಲ: ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮರದ ಕೆಲಸ(Wood Working) ಕುರಿತು ಮೂರು ತಿಂಗಳ ಕೌಶಲ್ಯ ತರಬೇತಿ ನಡೆಯಲಿದೆ. ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ ಮಣಿಪಾಲದಲ್ಲಿ ತರಬೇತಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ತರಬೇತಿ ಅವಧಿ: 12 ವಾರಗಳುಕಾಲಾವಧಿ: 10.00 ರಿಂದ 4.00ರ ತನಕ. ಸೋಮವಾರದಿಂದ ಶುಕ್ರವಾರದವರೆಗೆ ತರಬೇತಿಗಳು ಇರಲಿವೆ.‌ ತರಬೇತಿ ಶುಲ್ಕ: 25000 ರೂ., ಈ ಕೌಶಲ್ಯ ತರಬೇತಿಯ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಸಂಪರ್ಕಿಸಬಹುದು.ಮೊ: 8123163934, 8123163935

ಕುಂದಾಪುರ: ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಗೆ ಆಯ್ಕೆ.

ಕುಂದಾಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.