ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಪುನರ್ವಸತಿ ಕಲ್ಪಿಸಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ:ಮಾನ್ಯವಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ […]

ಉಡುಪಿ:ತಾಯಿ ಮರಣ ಪ್ರಮಾಣವನ್ನು ಶೂನ್ಯಗೊಳಿಸಲು ಒತ್ತು ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು ವೈದ್ಯರುಗಳುಹಾಗೂ ಸಿಬ್ಬಂದಿಗಳು ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯ ಗೊಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ […]

ಮಧ್ಯರಾತ್ರಿ ಉಡುಪಿಗೆ ಆಗಮಿಸಿದ ಲಾರಿ ಚಾಲಕ ಅರ್ಜುನ್ ಮೃತದೇಹ

ಉಡುಪಿ: ಶಿರೂರು ಗುಡ್ಡ ಕುಸಿತದಿಂದ ಮೃತಪಟ್ಟ ಲಾರಿ ಚಾಲಕ ಅರ್ಜುನ್ ಮೃತದೇಹ ಮಧ್ಯರಾತ್ರಿ ಉಡುಪಿಗೆ ಆಗಮಿಸಿತ್ತು. ಉತ್ತರಕನ್ನಡ ಜಿಲ್ಲಾಡಳಿತ ಮೃತದೇಹವನ್ನು ಶವಪೆಟ್ಟಿಗೆಯಲ್ಲಿ ರವಾನಿಸುವ ಬದಲು ಬಟ್ಟೆಯಲ್ಲಿ ಬಿಡಿಬಿಡಿಯಾಗಿ ಕಟ್ಟಿ ಕಳುಹಿಸಿಕೊಟ್ಟಿತ್ತು. ಸೂಕ್ತ ವ್ಯವಸ್ಥೆ ಕಲ್ಪಿಸದೆ ಮೃತದೇಹ ರವಾನಿಸುವ ಮೂಲಕ‌ ಉತ್ತರ ಕನ್ನಡ ಜಿಲ್ಲಾಡಳಿತದ ನಿರ್ಲಕ್ಷ್ಯ ವಹಿಸಿದೆಯೇ ಎಂಬ ಆರೋಪ ಕೇಳಿಬಂದಿದೆ. ಉಡುಪಿಯ ಕೇರಳ ಸಮಾಜ ಬಾಂಧವರು ಮತ್ತು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ಈಶ್ವರ್ ಮಲ್ಪೆ ಅವರು ಮೃತದೇಹ ಕಳುಹಿಸಿಕೊಡಲು ಫ್ರೀಜರ್ ಪೆಟ್ಟಿಗೆಯ ವ್ಯವಸ್ಥೆಯನ್ನು ಮಾಡಿಕೊಟ್ಟರು. […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ (ರಿ.).ಜೀರ್ಣೋದ್ಧಾರ ಕಾರ್ಯಕ್ರಮ

ಉಡುಪಿ:ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಅತ್ಯದ್ಭುತವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಈಗಾಗಲೇ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ಮಾರ್ಗದರ್ಶನದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕಾಗಿದ್ದು, ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲೂ ಪ್ರತೀ ಮನೆಯ ಪ್ರತಿಯೊಬ್ಬ ಸದಸ್ಯರಿಗೂ ವಿಷಯ ತಲುಪುವಂತೆ ಮಾಡಲು ಕಾಪು ಶ್ರೀ […]