ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಗೊಂದಲ ನಿವಾರಿಸಿ: ಹಳ್ಳಿಹೊಳೆ ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹ

ಉಡುಪಿ: ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಜನರ ವಿಶ್ವಾಸ ಪಡೆದು ಗೊಂದಲ ನಿವಾರಿಸಬೇಕು ಎಂದು ಹಳ್ಳಿಹೊಳೆ ಗ್ರಾ.ಪಂ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹೇಳಿದರು.ಈ ಕುರಿತು ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಸುಮಾರು 4,358 ಎಕರೆ ಭೂಮಿ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ, ಕೇಂದ್ರ ಪರಿಸರ, ಅರಣ್ಯ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ. ಈ ಪ್ರಕಾರ ಹಳ್ಳಿಹೊಳೆ ಗ್ರಾಮದ 7,240.50 […]

ಕಾರ್ಕಳ: ಮಿನಿ‌ ಲಾರಿ- ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಮೃತ್ಯು

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 4 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ಕುಂದರ್, ಸ್ಕಂದ, ಕೆ. ಶ್ರೀನಿತಾ ಎಸ್. ಕಾಮತ್, ವನಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

ಕುಂದಾಪುರ:ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ರನ್ನರ್ ಅಪ್ ಚಾಂಪಿಯನ್ ಶಿಪ್.

ಕುಂದಾಪುರ : ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ರನ್ನರ್ ಅಪ್ ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿದೆ.ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ಹಾಗೂ […]

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ ಮಲ್ಪೆ ಕುಟುಂಬಕ್ಕೆ ರೂ.1ಲಕ್ಷ ಮೊತ್ತದ ಚೆಕ್ ಹಸ್ತಾಂತರ

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ […]