ಉಡುಪಿ: ಏಕಕಾಲದಲ್ಲಿ 6 ಮನೆಗಳಲ್ಲಿ ಕಳ್ಳತನ; ಬೆಚ್ಚಿಬಿದ್ದ ಜನತೆ
ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಪೊಲೀಸ್ ಸ್ಟೇಷನ್ ಎದುರೇ ಇರುವ ಸರ್ಕಾರಿ ನೌಕರರ ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಸತಿ ಸಮುಚ್ಚಯದ ಸುಮಾರು ಆರು ಮನೆಗಳಿಗೆ ಕಳ್ಳರು ನುಗ್ಗಿದ್ದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಉಡುಪಿ “ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್” ನಲ್ಲಿ ಶ್ರವಣ ಸಂಬಂಧಿತ ಸಮಸ್ಯೆಗೆ ಸೂಕ್ತ ಪರಿಹಾರ.
ಉಡುಪಿ: ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ◾ಪದಗಳನ್ನು ಪುನರಾವರ್ತಿಸಲು ನೀವು ಆಗಾಗ್ಗೆ ಕೇಳುತ್ತೀರಾ? ◾ನಿಮ್ಮ ಕಿವಿಯಲ್ಲಿ ಯಾವಾಗಲೂ ಶಬ್ದವು ಧ್ವನಿಸುತ್ತಿರುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ಹೊಸ ಜನರನ್ನು ಭೇಟಿ ಯಾದಾಗ ನೀವು ಮುಜುಗರ ಕೊಳ್ಳಗಾಗುವಂತೆ ಭಾವಿಸುತ್ತದೆಯೇ ? ◾ನಿಮ್ಮ ಶ್ರವಣ ಸಮಸ್ಯೆಯೂ ನಿಮ್ಮನು ಖಿನ್ನತೆಗೆ ಒಳಪಡಿಸುತ್ತದೆಯೇ? ◾ನೀವು ಸಾಮಾಜಿಕ ಸಂವಹನದಲ್ಲಿ ಪಾಲ್ಗೊಳ್ಳುವಾಗ […]
ಕುಂದಾಪುರ:ದಸರಾ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನನ್.
ಕುಂದಾಪುರ : ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.
ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಮಗು ಮೃತ್ಯು.
ಕಾಸರಗೋಡು: ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ ಸಂಜೆ ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್ ಮೃತಪಟ್ಟ ಮಗು. ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ಬಳಿಕ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ. ಕೃಷಿಕರಾದ ನೌಶಾದ್ ಅವರ ಏಕೈಕ ಪುತ್ರನಾಗಿದ್ದ ಹಬೀಬ್. ಈ ಬಗ್ಗೆ ಕಾಸರಗೋಡು ನಗರ ಪೊಲೀಸ್ […]
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ರಕ್ತದಾನ ಶಿಬಿರ
ಉಡುಪಿ: ರಕ್ತದ ಒಂದೊಂದು ಹನಿಯೂ ಅತ್ಯಂತ ಅಮೂಲ್ಯವಾಗಿದ್ದು, ಜಗತ್ತಿನಲ್ಲಿ ಇದಕ್ಕೆ ಯಾವುದೇ ಪರ್ಯಾಯ ವಸ್ತುಗಳಿಲ್ಲ, ಇದುವರೆಗೂ ಅನ್ವೇಷಣೆಯಾಗಿಲ್ಲ. ಮಣಿಪಾಲದಂತಹ ಆಸ್ಪತ್ರೆಯಲ್ಲಿ ಪ್ರತಿದಿನ ನೂರಾರು ಯೂನಿಟ್ ಗಳ ರಕ್ತದ ಅವಶ್ಯಕತೆ ಇದ್ದು, ಇದಕ್ಕೆ ಸ್ವಯಂ ಪ್ರೇರಿತ ರಕ್ತದಾನವೇ ಪರಿಹಾರ ಎಂದು ಖ್ಯಾತ ಮೂಳೆತಜ್ಞ ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಉಪಕುಲಪತಿಗಳಾದ ಡಾಕ್ಟರ್ ಶರತ್ ರಾವ್ ಅಭಿಮತ ವ್ಯಕ್ತಪಡಿಸಿದರು. ಅವರು ಭಾನುವಾರ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಮತ್ತು ಡಾ.ಟಿ.ಎಮ್.ಎ ಪೈ ಪಾಲಿಟೆಕ್ನಿಕ್ ಮಣಿಪಾಲ, ಮಣಿಪಾಲ ಕೌಶಲ್ಯ ತರಬೇತಿ […]