ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು.

ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್‌ನಲ್ಲಿ ಉದ್ಯೋಗಿಯಾಗಿದ್ದರು. ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ […]
ಉಡುಪಿ: ಮೃತರ ಹೆಸರಿನಲ್ಲಿ ಷೇರುಗಳ ಮಾರಾಟ: 4 ಕೋಟಿ ರೂ. ವಂಚನೆ: ಪ್ರಕರಣ ದಾಖಲು

ಉಡುಪಿ: ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ, ಮೃತರ ಹೆಸರಿನಲ್ಲಿದ್ದ ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ?:ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಮೃತಪಟ್ಟಿದ್ದರು. ಮೃತರ ಪತ್ನಿ ಮತ್ತು ಮಕ್ಕಳು ಅಮೆರಿಕದಲ್ಲಿ ಇದ್ದ ಕಾರಣ ಅಶೊಕ್ ಅವರ ಅಂತಿಮ ಸಂಸ್ಕಾರವನ್ನು ಮೃತರ ಸಹೋದರನ ಮಗ ನವೀನ್ ನಡೆಸಿದ್ದರು. ಅಶೋಕ್ ಜು. 13ರಂದು ಮೃತಪಟ್ಟಿದ್ದರೂ ಮೃತರ […]
ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ.

ಉಡುಪಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೆ. 29ರ ರವಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ಆ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.