ಮೂಡುಬಿದಿರೆ:ಡಿಸೆಂಬರ್ 10 ರಿಂದ 15 ರವರೆಗೆ 06 ದಿನಗಳ 30ನೇ ವರ್ಷದ ಆಳ್ವಾಸ್ ವಿರಾಸತ್–2024 ಸಾರ್ವಜನಿಕರಿಗೆ ಸಂಪೂರ್ಣ ಉಚಿತ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ಗೆ ಈ ವರ್ಷ 30 ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ‘ಆಳ್ವಾಸ್ ವಿರಾಸತ್ 2024 ’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ […]

ಮಂಗಳೂರು: ತ್ರಿಶಾ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು:ದಿನದಿಂದ ದಿನಕ್ಕೆ ಬದಲಾಗುತ್ತಿರುವ ಈ ಶೈಕ್ಷಣಿಕ ಕ್ಷೇತ್ರದ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳ ಶಿಕ್ಷಣಕ್ಕೂ ಒತ್ತು ನೀಡುತ್ತಾ ಬಂದಿರುವ ಸಂಸ್ಥೆ ತ್ರಿಶಾ ಸಮೂಹ ಸಂಸ್ಥೆ. ಈ ಸಂಸ್ಥೆಯು ಮಂಗಳೂರಿನ ಅಳಕೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು ನೂತನ ಕಟ್ಟಡವು ಮಂಗಳೂರಿನ ವಿದ್ಯಾರ್ಥಿ ಗ್ರಾಮ, ಗಣೇಶ್ ಬಾಗ್ ಲೇಔಟ್, ಕೊಟ್ಟಾರ, ಬಂಗ್ರಾ ಕೂಳೂರಿನ ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ಹತ್ತಿರ ಸ್ಥಳಾಂತರಗೊಳ್ಳುತ್ತಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 4 ರಂದು ಹಲವು ಗಣ್ಯ ವ್ಯಕ್ತಿಗಳು, ಶಿಕ್ಷಣ ತಜ್ಞರು, ಹಾಗೂ […]

ಹಿರಿಯಡಕ: ಎಲೆಕ್ಟ್ರಾನಿಕ್ & ಫರ್ನಿಚರ್ ಶೋರೂಮ್’ನಲ್ಲಿ ಉದ್ಯೋಗಾವಕಾಶ.

ಉಡುಪಿ: ಹಿರಿಯಡಕದಲ್ಲಿ ಹೊಸದಾಗಿ ಆರಂಭಗೊಳ್ಳುವ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಶೋರೂಮ್’ನಲ್ಲಿ ಕಾರ್ಯನಿರ್ವಹಿಸಲು ಸ್ಟಾಫ್ (ಯುವತಿ) ಬೇಕಾಗಿದ್ದಾರೆ.ಪಿಯುಸಿ ಅಥವಾ ಡಿಗ್ರಿ ಶಿಕ್ಷಣ ಹೊಂದಿದವರು. ಸಮಯ ಬೆಳಿಗ್ಗೆ 9 ರಿಂದ ಸಂಜೆ 6:30 ರವರೆಗೆ,‌ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.‌ ಅನುಭವಸ್ಥರು/ ಹೊಸಬರು ಸಂಪರ್ಕಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್’ಅನ್ನು ವಾಟ್ಸಾಪ್ ಮೂಲಕ ಕಳುಹಿಸಿ.7892151626

ಬೆಳ್ತಂಗಡಿ: ಮನೆ ಅಂಗಳದಲ್ಲಿ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು.

ಬೆಳ್ತಂಗಡಿ: ಮನೆ ಅಂಗಳದಲ್ಲಿ ಕೂತಿದ್ದ ಬಾಲಕಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಅ.1 ರಂದು ಮಂಗಳವಾರ ನಡೆದಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ. ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.