ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್ ಪಾಲ್ ಸುವರ್ಣ
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2024 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಅಕ್ಟೋಬರ್ 5 ಶನಿವಾರ ಮಧ್ಯಾಹ್ನ 2 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ. ಅಕ್ಟೋಬರ್ 6 ರವಿವಾರ ಮಧ್ಯಾಹ್ನ 2 ಗಂಟೆಗೆ […]
ಉಡುಪಿ: ಅ.06 ರಂದು ಬೀದಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ.
ಉಡುಪಿ: ದಿವ್ಯಾಂಗ ರಕ್ಷಣಾ ಸಮಿತಿ ಕೊಡುವೂರು, ಪಶು ಚಿಕಿತ್ಸಾಲಯ ಮಲ್ಪೆ/ಜಿಲ್ಲಾ ಪಂಚಾಯತ್ ಉಡುಪಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಉಡುಪಿ ಯುವಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘ (ರಿ.) ಕೊಡವೂರು, ಲಯನ್ಸ್ & ಲಿಯೂ ಕ್ಲಬ್ ಪರ್ಕಳ ಹಾಗೂ ಗಣೇಶೋತ್ಸವ ಸಮಿತಿ ಕೊಡುವೂರು ಇವರ ಜಂಟಿ ಆಶ್ರಯದಲ್ಲಿ ಕೊಡವೂರಿನಲ್ಲಿ 6 ನೇ ಬಾರಿಗೆ ಸಾಕು / ಬೀದಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರವು ಅ.06 ರಂದು ಸ್ಥಳ ಕೊಡವೂರು ಶಾಲಾ […]
ಮಂಗಳೂರು: ಕೊಟ್ಟಾರಚೌಕಿ ಬಳಿ ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ತೀರ್ಪು
ಮಂಗಳೂರು: ಕೊಟ್ಟಾರಚೌಕಿ ಬಳಿ ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ ನೀಡುವಂತೆ ವಿಮಾ ಕಂಪೆನಿಗೆ ಆದೇಶಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ತೀರ್ಪು ನೀಡಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಕೊಟ್ಟಾರಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿ ಢಿಕ್ಕಿ ಹೊಡೆದು ಮೃತಪಟ್ಟಿದ್ದರು.ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ […]
ಸೀಟು ವಂಚಿತ: ಎಂಬಿಬಿಎಸ್ ವಿದ್ಯಾರ್ಥಿಗೆ 10ಲಕ್ಷ ರೂ. ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ.
ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಗೆ ಕ್ರೀಡಾ ಕೋಟಾದ ಬದಲು ಖಾಸಗಿ ಸೀಟಿಗೆ ತಪ್ಪಾಗಿ ವರ್ಗೀಕರಿಸಿದ್ದರಿಂದ ಆಗಿರುವ ನಷ್ಟ ಸರಿದೂಗಿಸಲು 10 ಲಕ್ಷ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಗರದ ಎಚ್‌ಎಸ್‌ಆರ್ ಲೇಔಟ್‌ನ ಚೆಸ್ ಆಟಗಾರ್ತಿ ಸಂಜನಾ ರಘುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅರ್ಜಿದಾರರು ವರ್ಷಕ್ಕೆ ಸರಿ ಸುಮಾರು 11,88,000 ರೂ.ಗಳನ್ನು ಪಾವತಿಸಿದ್ದಾರೆ. […]
ಕಾರ್ಕಳ: ಕಾರು ಢಿಕ್ಕಿ; ವ್ಯಕ್ತಿ ಸ್ಥಳದಲ್ಲಿಯೇ ಮೃತ್ಯು.
ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಡಾರು ಗ್ರಾಮದ ಅಬ್ಬನಬೆಟ್ಟು ಬಸದಿ ಕ್ರಾಸ್ ಹತ್ತಿರ ಅ.2ರಂದು ಸಂಜೆ 7ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಮಿಯಾರು ಗ್ರಾಮದ ನಾರ್ಕಟ್ಟ ನಿವಾಸಿ ಪಾಂಡುರಂಗ(57) ಎಂದು ಗುರುತಿಸಲಾಗಿದೆ. ಕುಂಟಿಬೈಲು ಕಡೆಯಿಂದ ಕೆರ್ವಾಶೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಪಾಂಡುರಂಗ ಅವರಿಗೆ ಕಾರು ಢಿಕ್ಕಿ ಹೊಡೆದಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ […]