ಉಡುಪಿ ತುಲಾಭಾರ ಸೇವೆಗೆ ಚಾಲನೆ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಸಂಪನ್ನಗೊಳ್ಳುತ್ತಿರುವ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ದೀಪ ಬೆಳಗಿಸಿ ಚಾಲನೆ ನೀಡಿದರು.. ಗತಕಾಲದ ಕ್ಷೇತ್ರ ಇತಿಹಾಸ ತಿಳಿಸುವಂತೆ ನಾಟ್ಯರಾಣಿ ಗಂಧರ್ವ ಕನ್ಯೆ ದೇವಿಯಿಂದ ಅನುಗ್ರಹಿತಳಾದ ತಾಣದಲ್ಲಿ ಕಲಾವಿದರಿಗೆ ವಿಶೇಷವಾಗಿ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪ್ರತೀತಿ ಇರುವ ಹಿನ್ನಲೆಯಲ್ಲಿ ಅನೇಕ ಕಲಾವಿದರು ತಮ್ಮ ಕಲಾ ಕಾಣಿಕೆಯನ್ನು […]
ಯುಪಿಎಂಸಿ – ವಾಣಿಜ್ಯ ಸಂಘದ ವತಿಯಿಂದ ಪೂರೈಕೆದಾರರ ಸಂಬಂಧ ನಿರ್ವಹಣೆ -ವಿಶೇಷ ಮಾಹಿತಿ ಕಾರ್ಯಾಗಾರ

ಉಡುಪಿ:ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ವತಿಯಿಂದ ಪೂರೈಕೆದಾರ ಸಂಬಂಧ ನಿರ್ವಹಣೆ (SRM) ವಿಚಾರವಾಗಿ ಮಾಹಿತಿ ಕಾರ್ಯಗಾರ ನಡೆಯಿತು. ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗು ಪ್ರಸ್ತುತ ಅದ್ವೈತ್ ಐ ಟೆಕ್ ನ ಸಹ ಉಪಾಧ್ಯಕ್ಷರಾದ ಶಾಂಭವಿ ಭಂಡಾರ್ಕರ್ ಮಾತನಾಡಿ ಪ್ರಸ್ತುತ ಕಾಲ ಘಟ್ಟದ ಪೂರೈಕೆದಾರರ ಆಧ್ಯತೆ ಮತ್ತು ಕರ್ತವ್ಯದ ಬಗ್ಗೆ ಹಾಗು ವಸ್ತುಗಳ ಗುಣಮಟ್ಟ ಮತ್ತು ಬೆಲೆಯ ಬಗ್ಗೆ ಈಗಿರುವ ಪೈಪೋಟಿಗಳ ಬಗೆಗೆ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಸಂಘದ […]
ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದುಗೊಳಿಸಲು ಹೊರಟಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ

ಉಡುಪಿ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಮಾಡಲು ಹೊರಟಿದೆ. ಸರಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದೆ. ಇನ್ನು 40 ಸಾವಿರ ಕಾರ್ಡ್ ಗಳನ್ನು ರದ್ದುಗೊಳಿಸಲು […]
ಉಡುಪಿ:ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ : ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ. ಸುತ್ತಲಿನ ಪರಿಸರಕ್ಕೆ, ಸಮಾಜಕ್ಕೆ, ಸ್ಪಂದಿಸುತ್ತಾ, ಸಮಾಜಮುಖಿಯಾಗಿ ಬದುಕುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಗುರುವಾರ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಉಡುಪಿ ಇವರ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು […]
ಉಡುಪಿ:ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ

ಉಡುಪಿ: ಸಾರ್ವಜನಿಕರಲ್ಲಿ ನೈರ್ಮಲ್ಯ ಶುಚಿತ್ವದ ಮಹತ್ವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ವಭಾವ ಸ್ವಚ್ಛತಾ ಸಂಸ್ಕಾರ ಸ್ವಚ್ಛತಾ ಎಂಬ ಧ್ಯೇಯವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಸೆಪ್ಟಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಪ್ರತಿಜ್ಞೆ, ಸಸಿ ನೆಡುವುದು, ತ್ಯಾಜ್ಯದಿಂದ ಕಲಾಕೃತಿ, ನೈರ್ಮಲ್ಯ ಶುಚಿತ್ವ ಕುರಿತು ಪ್ರಬಂಧ ಸ್ಪರ್ಧೆ, ಸ್ವಚ್ಛತೆಯ ಬಗ್ಗೆ ಕಿರು ನಾಟಕ, ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಅಕ್ಟೋಬರ್ 2 ರಂದು […]