ಕುಂದಾಪುರ: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ […]

ಉಡುಪಿ: ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’

ಉಡುಪಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ. ಪ್ರಶಸ್ತಿಯು 20,000 ನಗದು ಒಳಗೊಂಡಿದೆ. ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ .ನಿರಂಜನ ಚೋಳಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮುರುಡೇಶ್ವರ: ಸಮುದ್ರದ ಅಲೆಗೆ ಸಿಲುಕಿ ವಿದ್ಯಾರ್ಥಿ ಮೃತ್ಯು, ಓರ್ವನ ರಕ್ಷಣೆ.

ಮುರುಡೇಶ್ವರ: ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಬೆಂಗಳೂರಿನ ವಿಧ್ಯಾಸೌದ ಪ್ರಥಮ ದರ್ಜೆ ಕಾಲೇಜಿನ ಗೌತಮ್ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಒಟ್ಟೂ 220 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭ ಗೌತಮ್ ಹಾಗೂ ಧನುಶ್ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮಧನುಶ್ ಎಂಬಾತನನ್ನ ಸ್ಥಳೀಯ ಲೈಪ್ […]

ವಿವಾಹದ ಬಳಿಕ ಲಂಡನ್ ನಲ್ಲಿ ಬಸವೇಶ್ವರ ದೇವರ ಆಶೀರ್ವಾದವನ್ನು ಪಡೆದ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ್ ಘೋರ್ಪಡೆ

ಲಂಡನ್: ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಮತ್ತು ವಿಜಯ್ ಘೋರ್ಪಡೆ ಇತ್ತೀಚೆಗೆ ತಮ್ಮ ವಿವಾಹದ ನಂತರ ಲಂಡನ್‌ನಲ್ಲಿರುವ ಬಸವೇಶ್ವರ ದೇವರ ಆಶೀರ್ವಾದವನ್ನು ಕೋರಿದರು. ಅವರೊಂದಿಗೆ ಬ್ರಿಟಿಷ್ ಭಾರತೀಯ ಮತ್ತು ಕನ್ನಡ ಸಮುದಾಯಗಳ ಸದಸ್ಯರು ಸೇರಿಕೊಂಡರು. ಯುನೈಟೆಡ್ ಕಿಂಗ್‌ಡಮ್‌ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಮತ್ತು ಬಸವ ಸಮಿತಿ ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಯುಕೆಯಲ್ಲಿರುವ ಎರಡು ಪ್ರಮುಖ ಕನ್ನಡ ಸಂಸ್ಥೆಗಳಾದ ಕನ್ನಡ ಬಳಗ ಮತ್ತು ಕನ್ನಡಿಗರು ಯುಕೆ ಗಮನಾರ್ಹವಾಗಿ ಭಾಗವಹಿಸಿದ್ದವು. ಹೆಚ್ಚುವರಿಯಾಗಿ, ಲಂಡನ್ ಬರೋ ಆಫ್ ಲ್ಯಾಂಬೆತ್‌ನ […]

ಗಂಗೊಳ್ಳಿ ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ; ದೇವಸ್ಥಾನದ ಅರ್ಚಕ ಬಂಧನ; 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಉಡುಪಿ: ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ. ಆರೋಪಿಯಿಂದ 40 […]