ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜೋಡಿ ಲಲಿತ ಸಹಸ್ರ ಕದಳಿಯಾಗ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಲಲಿತಾ ಪಂಚಮಿಯ ಪರ್ವಕಾಲದಲ್ಲಿ ಜೋಡಿ ಲಲಿತಾ ಸಹಸ್ರ ಕದಳಿಯಾಗ ಸಂಪನ್ನಗೊಂಡಿತು.. ದಕ್ಷಿಣ ಭಾರತದಲ್ಲಿ ಅತಿ ಎತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀ ಕ್ಷೇತ್ರದಲ್ಲಿ ಶ್ರೀ ಚಕ್ರಪಿಟಾರೂಢಳಾದ ರಾಜರಾಜೇಶ್ವರಿಗೆ ಸಲ್ಲಿಕೆಯಾಗುವ ಮಹಾನ್ ಯಾಗವೇ ಲಲಿತ ಸಹಸ್ರ ಕದಳಿಯಾಗ… ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕದಳಿಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ಶ್ರೀ ಲಲಿತಾಂಬಿಕೆಯನ್ನು ಸಹಸ್ರನಾಮಗಳಿಂದ ಸ್ತುತಿಸಿ ವಿಧವಿಧ ಕುಸುಮಗಳಿಂದ ಅರ್ಜಿಸಿ ಬಗೆ ಬಗೆಯ ಆರತಿಯನ್ನು […]

ಕಿನ್ನಿಗೋಳಿ:ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ;ಅಪಾಯದಿಂದ ಪಾರಾದ ತಾಯಿ ಮಕ್ಕಳು

ಕಿನ್ನಿಗೋಳಿ: ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ ‌ಮುಂಭಾಗ ಸೋಮವಾರ (ಅ.07) ನಡೆದಿದೆ. ಕಿನ್ನಿಗೋಳಿ ಸಮೀಪದ ದಾಮಸ್‌ ಕಟ್ಟೆ ನಿವಾಸಿ ಜಾಸ್ಮಿನ್ ಅವರು ಮತ್ತೋರ್ವ ಮಹಿಳೆ ‌ಮತ್ತು ಎರಡು ‌ಮಕ್ಕಳೊಂದಿಗೆ ಕಿನ್ನಿಗೋಳಿ‌ ಮಾರುಕಟ್ಟೆ ಮುಂಭಾಗ ಕಾರು ನಿಲ್ಲಿಸಿ ಹೋದ ಸಂದರ್ಭ ಕಾರಿನಲ್ಲಿ ಹೊಗೆ ಬರಲಾರಂಭಿಸಿದೆ. ಕಾರಿನಲ್ಲಿದ್ದ ಮಹಿಳೆ ಮತ್ತು ಎರಡು ಮಕ್ಕಳು ಬೊಬ್ಬೆ ಹಾಕಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರಿನಲ್ಲಿದ್ದವರನ್ನು ಅಪಾಯದಿಂದ ಪಾರು‌ ಮಾಡಿದ್ದಾರೆ. ಸ್ಥಳೀಯ ಅಂಗಡಿ […]

ಹೆಬ್ರಿ: ಮಳೆಗೆ ನೀರಿಗೆ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ

ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನಿನ್ನೆ ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ‌ ಸುರಿದ ಮಳೆಗೆ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಇಂದು ಪತ್ತೆಯಾಗಿದೆ.ಮೃತರನ್ನು ಚಂದ್ರ ಗೌಡ್ತಿ (85) ಎಂದು ಗುರುತಿಸಲಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ಮುದ್ರಾಡಿಯ ಬಲ್ಲಾಡಿಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಮಳೆ ನೀರಿನ ರಭಸಕ್ಕೆ ಚಂದ್ರ ಗೌಡ್ತಿ ಕೊಚ್ಚಿ ಹೋಗಿದ್ದರು. ನಿನ್ನೆ ರಾತ್ರಿಯವರೆಗೂ ಪತ್ತೆಯಾಗಿರಲಿಲ್ಲ‌. ಇಂದು ಮುಂಜಾನೆ ಬಲ್ಲಾಡಿ ಪರಿಸರದ ಗದ್ದೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ.ಭಾನುವಾರ ಮಧ್ಯಾಹ್ನ 3ಗಂಟೆಯಿಂದ 5ಗಂಟೆಯವರೆಗೆ ಧಾರಾಕಾರ ಮಳೆ ಸುರಿದಿದ್ದು, ವ್ಯಾಪಕ ಮಳೆಗೆ […]

ಕುಂದಾಪುರ: ಮೂಡ್ಲಕಟ್ಟೆ ಐಎಮ್‌ಜೆ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಹೊಸ ಕೋರ್ಸ್‌ಗಳು ಪ್ರಾರಂಭ.

ಕುಂದಾಪುರ: ಮೂಡ್ಲಕಟ್ಟೆ ನಾಗರತ್ನ ಭುಜಂಗ ಶೆಟ್ಟಿ (ಎಂಎನ್‌ಬಿಎಸ್) ಟ್ರಸ್ಟ್ ಆಶ್ರಯದಲ್ಲಿ ಐಎಮ್‌ಜೆ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (NSDC) ಸಹಕಾರದೊಂದಿಗೆ ವಿಶೇಷ ಕೌಶಲ್ಯಾಭಿವೃದ್ಧಿ ಹೊಸ ಕೋರ್ಸ್‌ಗಳು ಆರಂಭವಾಗುತ್ತಿವೆ. ಇವು ಅತ್ಯುತ್ತಮ ಉದ್ಯೋಗಾವಕಾಶ ಒದಗಿಸುವ ವೃತ್ತಿಪರ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಸುಲಭ ಹಾಗೂ ಲಾಭದಾಯಕ ಶುಲ್ಕದಲ್ಲಿ ಲಭ್ಯವಿವೆ. ಈ ಕೆಳಗಿನ ಕೋರ್ಸ್‌ಗಳು ಲಭ್ಯವಿರುತ್ತವೆ. ಡಾಕ್ಯುಮೆಂಟೇಶನ್ ಎಕ್ಸಿಕ್ಯುಟಿವ್ (8 ತಿಂಗಳು):ಈ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ಬಿಜ್ನೆಸ್ ಡಾಕ್ಯುಮೆಂಟ್‌ಗಳನ್ನು ತಯಾರಿಸಲು ಮತ್ತು ಸಮರ್ಥವಾಗಿ ನಿರ್ವಹಿಸಲು ಅಗತ್ಯವಿರುವ […]

ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು.

ಉಡುಪಿ: ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು-ಉಡುಪಿ ಏಕಮುಖ ರಸ್ತೆಯಲ್ಲಿ ಅ.1ರ ರಾತ್ರಿಯ ವೇಳೆ ಮಾರುತಿ ಕಾರು ಢಿಕ್ಕಿಯಾಗಿ ತೀವ್ರತರ ಗಾಯಗೊಂಡಿದ್ದ ಅದಮಾರಿನ ಸುದರ್ಶನ್‌ (45) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ ಆಸ್ಪತ್ರೆಯಲ್ಲಿ ಅ.5 ರಂದು ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ. ಸುದರ್ಶನ್‌ ಅವರು ರಸ್ತೆ ದಾಟುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ತಲೆ, ಎದೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದ ಅವರಿಗೆ ತೀವ್ರನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೂಲಿ ಕಾರ್ಮಿಕರೂ, ಅವಿವಾಹಿತರಾಗಿರುವ ಸುದರ್ಶನ್‌ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. […]