ಉಡುಪಿ:ವಿವಿಧ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತೀ ಸೂಕ್ಷ್ಮ ಸಮುದಾಯದವರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಸದರಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವೆಬ್‌ಸೈಟ್https://sevasindhu.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ […]
ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆ.

ಮಂಗಳೂರು: ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹವನ್ನು ಕೂಡಲೇ ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.ಭಾನುವಾರ ಬೆಳಿಗ್ಗೆ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು.ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ […]
ಉಡುಪಿ:ಅ.9 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, […]
ಉಡುಪಿ:ರೆಡ್‌ಕ್ರಾಸ್ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮವು ಶನಿವಾರ ನಗರದ ಬ್ರಹ್ಮಗಿರಿಯರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು. ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ […]
ಕಟಪಾಡಿ:ತ್ರಿಶಾ ವಿದ್ಯಾ ಕಾಲೇಜು: “ಬಲೆ ತುಲು ಲಿಪಿ ಕಲ್ಪುಗ” ತುಳು ಭಾಷಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

ಕಟಪಾಡಿ:ತುಳುನಾಡಿನ ಪಂಚ ವರ್ಣದ ಮಣ್ಣಿನ ಮಕ್ಕಳು ನಾವೆಲ್ಲರೂ. ನಮ್ಮ ಸಂಸ್ಕೃತಿ ಆಚಾರ ವಿಚಾರ ಜೊತೆಗೆ ನಮ್ಮ ಭಾಷೆಯನ್ನು ಕೂಡ ಕಲಿಯುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 5 ರಂದು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ “ಬಲೆ ತುಲು ಲಿಪಿ ಕಲ್ಪುಗ” ಅನ್ನುವ ತುಳು ಭಾಷಾ ತರಬೇತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ತರಗತಿಗೆ ಚಾಲನೆಯನ್ನು ನೀಡಲಾಯಿತು. ಉದ್ಘಾಟನೆ ನೆರವೇರಿಸಿದ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ನಾರಾಯಣ್ ರಾವ್ ರವರು ಇಂದು ಭಾಷೆಯನ್ನು ಕಲಿಯಲು ಹಲವಾರು ಆಧುನಿಕ ತಂತ್ರಜ್ಞಾನಗಳಿವೆ ಆದರೆ […]