ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಶರನ್ನವರಾತ್ರಿ ಮಹೋತ್ಸವ:ಸಾವಿರಾರು ಭಕ್ತರ ಆಗಮನ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ 18ನೇ ವರ್ಷದ ಶರನ್ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರುತ್ತಿದೆ.. ದಿನ ಪ್ರತಿ ಜೋಡಿ ಚಂಡಿಕಾಯಾಗ ದುರ್ಗಾ ನಮಸ್ಕಾರ ಪೂಜೆ ವಿಜಯದಶಮಿಯ ಪರ್ವಕಾಲದಲ್ಲಿ ತ್ರಿಲೋಕೇಶ್ವರಿ ಮಹಾಯಾಗ ಬಲಿ ಉತ್ಸವ ರಂಗ ಪೂಜಾ ಮಹೋತ್ಸವ ನಿರಂತರ ಮೃಷ್ಟಾನ್ನ ಸಂತರ್ಪಣೆ ಸಾಂಸ್ಕೃತಿಕ ವೈಭವ ಹೀಗೆ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಕ್ಷೇತ್ರ ನವರಾತ್ರಿ ಸಂಭ್ರಮಕ್ಕೆ ಸಾಕ್ಷಿಭೂತವಾಗಿದೆ.. ಬರಡು […]
ಹರಿಯಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್‌ಗೆ ಭರ್ಜರಿ ಗೆಲುವು

ನವದೆಹಲಿ, ಅ.08: ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ ಅವರು 5,000 ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೂಲಾನಾ ಕ್ಷೇತ್ರದಲ್ಲಿ ವಿನೇಶ್ ಫೋಗಟ್‌ಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರು ಕಣಕ್ಕಿಳಿದಿದ್ದರು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದ್ದು, ಬಳಿಕ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಈ ಮೂಲಕ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ […]
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಖುಲಾಸೆ.

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪಿತ್ತಿದೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ 23-06-2023 ರಂದು ಆರೋಪಿ ಶಾಶ್ವತ್ ಬಾಲಕಿಯನ್ನು ಹುಟ್ಟುಹಬ್ಬದ ನೆಪದಲ್ಲಿ ತನ್ನ ಸಹೋದರನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗೇಶ್ ಪ್ರಕರಣದ ತನಿಖೆ ನಡೆಸಿ ಆರೋಪಿ […]
ಉಡುಪಿ: ರಸ್ತೆಯಲ್ಲಿ ತೈಲ ಸೋರಿಕೆ- ಹಲವು ಬೈಕ್ ಸ್ಕಿಡ್

ಉಡುಪಿ: ವಾಹನವೊಂದರಿಂದ ತೈಲ ಸೊರಿಕೆಯಾದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಅಪರಿಚಿತ ವಾಹನವೊಂದರಿಂದ ತೈಲವು ರಸ್ತೆಗೆ ಸೋರಿಕೆಯಾಗಿದ್ದು, ಇದರ ಮೇಲೆ ಚಲಿಸಿದ ನಾಲ್ಕೈದು ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿವೆ. ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಮಲ್ಪೆ ಅಗ್ನಿಶಾಮಕ ದಳದ ಜಲ ವಾಹನವು ಸ್ಥಳಕ್ಕೆ ಬಂದು ರಸ್ತೆಗೆ […]
ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಕಾರೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ. ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ. ವೀರಜ್ ತನ್ನ ಬೈಕ್ ನಲ್ಲಿ ಉಡುಪಿ ಕಡೆಯಿಂದ ಎಂಜಿಎಂ ಕಾಲೇಜಿನ ಮುಂಭಾಗದ ಡೈವರ್ಶನ್ ನಲ್ಲಿ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದರು. ಈ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ […]