ಉಡುಪಿ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನೂತನ ಪುರುಷರ ವಸ್ತ್ರ ಮಳಿಗೆ ಉದ್ಘಾಟನೆ.

ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ ಅಂಗಡಿಯ ಮೂಲಕ ಸತತ ಪರಿಶ್ರಮ, ಶ್ರದ್ದೆಯಿಂದ ದುಡಿಯುತ್ತಾ, ಪ್ರಸ್ತುತ ಜಿಲ್ಲೆಯಲ್ಲಿಯೇ ಬೃಹತ್ ವಸ್ತ್ರ ವೈವಿಧ್ಯಗಳ ಮಳಿಗೆಯನ್ನು ತೆರೆಯುವ ಸಾಧನೆ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ವಸ್ತ್ರ ವಿನ್ಯಾಸಗಳನ್ನು ನೀಡಿದಾಗ ವ್ಯಾಪಾರ ಇನ್ನಷ್ಟು ಅಭಿವೃದ್ಧಿ […]
ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

ಉಡುಪಿ: ಷೇರು ಮಾರುಕಟ್ಟೆ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿಗೆ ಹಣ ನೀಡುವುದಾಗಿ ತಿಳಿಸಿದ್ದರು. ಅದರಂತೆ ರಫಿಯತ್ ಅವರಿಂದ ದುಷ್ಕರ್ಮಿಗಳು ಒಟ್ಟು 16,78,500ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.
ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನದಲ್ಲಿ ಅ.12ರಂದು ಸಾಮೂಹಿಕ ಚಂಡಿಕಾಯಾಗ

ಬ್ರಹ್ಮಾವರ: ಇತಿಹಾಸ ಪ್ರಸಿದ್ಧ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಬಬ್ಬುಸ್ವಾಮಿ ಮೂಲ ಕ್ಷೇತ್ರದಲ್ಲಿ ಶನಿವಾರ ವಿಜಯದಶಮಿ ಪ್ರಯಾಕ್ತ ಸಾಮೂಹಿಕ ಚಂಡಿಕಾ ಯಾಗ, ತುಲಬಾರ ಸೇವೆ, ವಿವಿಧ ತಂಡಗಳಿಂದ ಭಜನಾ ಸೇವೆ, ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. 1 ಗಂಟೆಯಿಂದ ಆಕಾಶವಾಣಿ ಕಲಾವಿದ ಶ್ರೀ ತಿಮ್ಮಪ್ಪ ಕರ್ಕೇರ ಸಾಲಿಗ್ರಾಮ ಹಾಗೂ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಲಿದೆ. ಸಾಮೂಹಿಕ ಚಂಡಿಕಾ ಯಾಗ ಸೇವೆಯಲ್ಲಿ ಸುಮಾರು 200 ಅಧಿಕ ಸೇವಕರ್ತರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಇತಿಹಾಸ ಪ್ರಸಿದ್ಧ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ.12ರಂದು ವಿಜಯದಶಮಿ ಉತ್ಸವ.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಅ.12ರ ವರೆಗೆ ದೇವರ ಸನ್ನಿಧಿಯಲ್ಲಿ ನಡೆಯಿದೆ. ದಿನಾಂಕ: 09-10-2024 ನೇ ಬುಧವಾರ:ಬೆಳಿಗ್ಗೆ 5.30ರಿಂದ ತ್ರಿಕಾಲ ಪೂಜೆಯ ಜೊತೆಯಲ್ಲಿ ವಿಶೇಷ ಅಲಂಕಾರದೊಂದಿಗೆ ಚಂಡಮುಂಡಹಾ ದುರ್ಗಾ ಪೂಜೆ, ಸರಸ್ವತಿ ಹೋಮ. ಬೆಳಿಗ್ಗೆ 8:30 ರಿಂದ ಚಂಡಿಕಾ ಹೋಮ ಮೂಲಾ ನಕ್ಷತ್ರ- ದೇವಸ್ಥಾನದ ವತಿಯಿಂದ. ಮಧ್ಯಾಹ್ನ 12.00ಕ್ಕೆ ಮಹಾಪೂಜೆ ಮತ್ತು 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4.00 ರಿಂದ ರುದ್ರ […]
ಉಡುಪಿ:ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55 ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ(ಅ8) ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ.ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಬುಧವಾರ ತಿಳಿಸಿವೆ.