ಉಡುಪಿ:ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ […]
ಮಂಗಳೂರು:ವಕ್ರದಂತದ ಬಗ್ಗೆ ಜಾಗೃತಿ, ಮಾಹಿತಿ ಕಾರ್ಯಾಗಾರ

ಮಂಗಳೂರು:ಮಗುವಿನ ವಕ್ರದಂತ ಮತ್ತು ಮುಖಾಂಗ ನ್ಯೂನತಾ ಸಮಸ್ಯೆಗಳನ್ನು ತಡೆಯುವಲ್ಲಿ ತಾಯಿಯ ಪಾತ್ರ -ಅರಿವು ಮತ್ತು ಜಾಗ್ರತಾ ಮಾಹಿತಿ ಕಾರ್ಯಗಾರ ನಗರದ ಮುಕ್ಕದ ಶ್ರೀನಿವಾಸ್ ದಂತ ಮಹಾವಿದ್ಯಾಲಯದಲ್ಲಿ ವಕ್ರದಂತ ಮತ್ತು ಮುಖಾಂಗ ನ್ಯೂನತಾ ಚಿಕಿತ್ಸಾ ವಿಭಾಗ ಮತ್ತು ಮಂಗಳೂರು ವಕ್ರ ದಂತ ಚಿಕಿತ್ಸಕರ ಸಂಘ ಸಹಯೋಗದಲ್ಲಿ ನಡೆಯಿತು. ಸಂಸ್ಥೆಯ ಡೀನ್ ಮತ್ತು ಪ್ರಿನ್ಸಿಪಾಲ್ ಡಾ. ಕೆ. ರೇಷ್ಮಾ ಪೈ ಉದ್ಘಾಟಿಸಿದರು. ವಕ್ರದಂತ ಚಿಕಿತ್ಸಕರ ಸಂಘದ ಸಂಚಾಲಕ ಡಾ.ಮಿಥುನ್ ನಾಯಕ್ ಶುಭ ಹಾರೈಸಿದರು. 70ಕ್ಕೂ ಅಧಿಕ ತಾಯಂದಿರು ಭಾಗವಹಿಸಿದ್ದರು. ವಿಭಾಗದ […]
ಕಾಪು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ: ಸೌದಿಯಿಂದ ರಜೆಯಲ್ಲಿ ಊರಿಗೆ ಬಂದಿದ್ದ ವ್ಯಕ್ತಿ ಸಾವು

ಉಡುಪಿ: ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ […]
ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಅಕ್ಷರಾಭ್ಯಾಸಕ್ಕೆ ಚಾಲನೆ

ಉಡುಪಿ : ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ನೇತೃತ್ವದಲ್ಲಿ ನೆರವೇರುತ್ತಿರುವ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಕ್ಷೇತ್ರದಲ್ಲಿ ವಿದ್ಯಾರಂಭಕ್ಕೆ ಚಾಲನೆ ನೀಡಲಾಯಿತು.. ದಕ್ಷಿಣ ಭಾರತದಲ್ಲಿ ಅತಿ ಉತ್ತರವಾದ ಮೇರು ಶ್ರೀ ಚಕ್ರವನ್ನು ಹೊಂದಿರುವ ಶ್ರೀಚಕ್ರ ಪೀಠ ಸುರಪೂಜಿತೆಯ ಸನ್ನಿಧಾನದಲ್ಲಿ ಸಾಕ್ಷಾತ್ ಸರಸ್ವತಿಯ ಅನುಗ್ರಹದ ನೆಲೆಯಲ್ಲಿ ಅನೇಕ ಮಕ್ಕಳಿಗೆ ವಿದ್ಯಾರಂಭ ಮಾಡಿಸಲಾಯಿತು.. ಮಧ್ಯಾಹ್ನ ಅನೇಕ ನೃತ್ಯಾಲಯದ ನೃತ್ಯಾರ್ಥಿಗಳು ನೃತ್ಯ ಸೇವೆ […]
ತಿರುಪತಿಗೆ ಉಡುಪಿ-ಕುಂದಾಪುರದಿಂದ ನೇರ ರೈಲು ಸಂಪರ್ಕ..!

ಕುಂದಾಪುರ: ಪ್ರಸಿದ್ಧ ಪುಣ್ಯ ಕ್ಷೇತ್ರವಾದ ತಿರುಪತಿಗೆ ಉಡುಪಿ, ಕುಂದಾಪುರದಿಂದ ನೇರ ರೈಲು ಸಂಪರ್ಕ ಕಲ್ಪಿಸಬೇಕು ಅನ್ನುವ ಈ ಭಾಗದ ಜನರ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ರೈಲ್ವೇ ಸಚಿವಾಲಯವು ಮಂಗಳೂರುವರೆಗೆ ಬರುತ್ತಿದ್ದ ರೈಲು (12789/12790) ಅನ್ನು ಮುರ್ಡೇಶ್ವರದವರೆಗೆ ವಿಸ್ತರಿಸಲು ಒಪ್ಪಿಗೆ ನೀಡಿ ಆದೇಶಿಸಿದೆ. ಈ ರೈಲು ಸೇವೆಯೊಂದಿಗೆ ಹೈದರಾಬಾದ್ ನಗರಿಯೊಂದಿಗೂ ಸಂಪರ್ಕ ಸಾಧ್ಯವಾಗಲಿದೆ. ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣದ ಮೂಲಕ ಮಂಗಳೂರಿಗೆ ಬರುತ್ತಿದ್ದ ಕಾಚಿಗುಡ […]