ಮುಕ್ತ ವಿ.ವಿ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸ್ಸಿ, ಬಿ.ಎಸ್ಸಿ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಲಿಬ್ ಐ.ಎಸ್.ಸ್ಸಿ, ಎಂ.ಎಸ್.ಡಬ್ಲ್ಯೂ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು, ಡಿಪ್ಲೋಮಾ, ಪಿಜಿ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳ ಪ್ರವೇಶಾತಿಗೆ, ಆಸಕ್ತ ಅಭ್ಯರ್ಥಿಗಳು ಪ್ರಾದೇಶಿಕ ಕೆಂದ್ರದಲ್ಲಿ ನವೆಂಬರ್ 15 ರ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in […]

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಉಡುಪಿ: ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಬೆಳೆ ಸಾಲ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ […]

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. […]

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 […]

ನಿರ್ಲಕ್ಷ್ಯದಿಂದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು- ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ […]