ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ವಿಜಯದಶಮಿ ಸಂಭ್ರಮ; ನೂರಾರು ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬ್ರಾಹ್ಮ ಮುಹೂರ್ತದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಲಾಯಿತು.ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ವೈದಿಕರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗಳು ಮತ್ತು ಸಂಖ್ಯೆಗಳನ್ನು ಬರೆಯಿಸಿ ಅಕ್ಷರಾಭ್ಯಾಸಕ್ಕೆ […]

ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 12.5 ಲಕ್ಷ ರೂ. ಗೆದ್ದ ಕಾರ್ಕಳ ಮೂಲದ ಡಾ. ಶ್ರೀಶ್ ಶೆಟ್ಟಿ

ಉಡುಪಿ: ಕೌನ್‌ ಬನೇಗಾ ಕರೋಡ್‌ಪತಿ (ಕೆಬಿಸಿ) ಯಲ್ಲಿ ಕರಾವಳಿ ಮೂಲದ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆಯ ಡಾ. ಶ್ರೀಶ್‌ ಸತೀಶ್‌ ಶೆಟ್ಟಿ ಅವರು 12.5 ಲಕ್ಷ ರೂ. ಗೆದ್ದುಕೊಂಡಿದ್ದಾರೆ.ಅ. 10 ಮತ್ತು 11 ರಂದು ಸೋನಿ ಟಿವಿಯಲ್ಲಿ ಅವರ ಸಂಚಿಕೆ ಪ್ರಸಾರಗೊಂಡಿದೆ. ಶ್ರೀಶ್ ಸತೀಶ್ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದರು. 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ಹೆಸರು ಕೇಳಲಾಗಿತ್ತು. ಜನರಲ್ ಕೆ.ಎಂ. ಕಾರ್ಯಪ್ಪ, ವಿಜಯ ತೆಂಡೂಲ್ಕರ್‌, […]

ಕಲಾಕ್ಷೇತ್ರದ ಸಾರಥ್ಯದಲ್ಲಿ ಪರಂಪರೆಯ ಕುಂದಾಪುರ ಹುಲಿ ಕುಣಿತ

ಉಡುಪಿ: ಕುಂದಾಪುರ ಕಲಾಕ್ಷೇತ್ರದ ಸಾರಥ್ಯದಲ್ಲಿ ಕುಂದಾಪುರ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕುಂದಾಪುರ ಹುಲಿ ಕುಣಿತ ನಡೆಯಿತು.ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪರಂಪರೆಯ ಕುಂದಾಪುರ ಹುಲಿ ಕುಣಿತ ಪ್ರದರ್ಶನಗೊಂಡಿತು. ರಾಜೀವ ಕೋಟ್ಯಾನ್ ಹುಲಿವೇಷದ ಗೊಂಡೆಗೆ ಪಟ್ಟಿ ಕಟ್ಟುವ ಮೂಲಕ ಚಾಲನೆ ನೀಡಿದರು. ಕಲಾಕ್ಷೇತ್ರದ ಅಧ್ಯಕ್ಷರಾದ ಬಿ.ಕಿಶೋರ್ ಕುಮಾರ್ ಕಾರ್ಯಕ್ರಮ ಆಶಯವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಹುಲಿವೇಷ ಕುಣಿತದ ಹಿನ್ನೆಲೆ ವಾದಕರಾದ ಡಾ.ಮಂಜನಾಥ ದೇವಾಡಿಗ, ಸುರೇಶ, ಪ್ರತಾಪ್, ರಾಜೇಶ್, ಮಂಜುನಾಥ ದೇವಾಡಿಗ, ಸುಬ್ರಹ್ಮಣ್ಯ ಹಾಗು ಹುಲಿವೇಷಧಾರಿಗಳನ್ನು ಗೌರವಿಸಲಾಯಿತು. ಬಳಿಕ ಪರಂಪರೆಯ ಹುಲಿ […]

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ. ಏಷ್ಯಾದ ಅತೀ ದೊಡ್ಡ ಮೀನುಗಾರಿಕಾ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆ ಬಂದರಿನಲ್ಲಿ ಕೆಲಸಕ್ಕಾಗಿ ಬಂದು ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪೊಲೀಸರು ತಕ್ಷಣ ಅಕ್ರಮ ವಲಸಿಗರಿಗೆ ಸಹಕರಿಸಿದವರನ್ನು ತಕ್ಷಣ ಬಂಧಿಸಿ […]

ಕೊಕ್ಕರ್ಣೆಯ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆಗೆ ಸಂಸದ ಕೋಟ, ಶಾಸಕ ಯಶ್ ಪಾಲ್ ಭೇಟಿ

ಉಡುಪಿ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮುಖ್ಯರಸ್ತೆಯ ಓಂಶ್ರೀ ಸಂಕೀರ್ಣದಲ್ಲಿ ಆರಂಭಗೊಂಡ ‘ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ “ಶ್ರೀರಾಮ್ ಟೆಕ್ಸ್‌ ಟೈಲ್ಸ್” ಮಳಿಗೆಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ, ಶುಭಹಾರೈಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕೋಟ ಶ್ರೀನಿವಾಸ ಪೂಜಾರಿ‌ ಹಾಗೂ ಯಶ್ ಪಾಲ್ ಸುವರ್ಣರನ್ನು ಗೌರವಿಸಲಾಯಿತು.ಸಂಸ್ಥೆಯ ಪಾಲುದಾರರಾದ ಬಿ. ಸತ್ಯನಾಥ ಪುರುಷೋತ್ತಮ ಪೈ, ಬಿ. ಗಿರಿಧರ ಸತ್ಯನಾಥ ಪೈ, ಸ್ಮಿತಾ ಆರ್. ನಾಯಕ್, ಓಂಶ್ರೀ ರಾಘವೇಂದ್ರ […]