‘ಯುಐ’ ಸಿನಿಮಾ ಬಿಡುಗಡೆಯ ದಿನಾಂಕ ಘೋಷಿಸಿದ ಉಪೇಂದ್ರ

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಹುನಿರೀಕ್ಷಿತ ‘ಯುಐ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.‘ಯುಐ’ ಸಿನಿಮಾ ಇದೇ ಡಿಸೆಂಬರ್ 20ರಂದು ತೆರೆಗೆ ಬರಲಿದೆ ಎಂದು ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಘೋಷಿಸಿದ್ದಾರೆ. ಉಪೇಂದ್ರ ಅವರು ಈ ಚಿತ್ರದಲ್ಲಿ ನಾಯಕ ನಟನ ಪಾತ್ರ ನಿರ್ವಹಿಸಿದ್ದಾರೆ. ಈ ಮೊದಲು ‘ಯುಐ’ ಚಿತ್ರ ಏಪ್ರಿಲ್‌ನಲ್ಲಿಯೇ ತೆರೆಗೆ ಬರಬೇಕಿತ್ತು. ಗ್ರಾಫಿಕ್ಸ್ ಕೆಲಸದಿಂದ ಚಿತ್ರ ಬಿಡುಗಡೆ ವಿಳಂಬವಾಗಿತ್ತು. ನಂತರ ಗೌರಿ-ಗಣೇಶ ಹಬ್ಬಕ್ಕೆ ಬರುತ್ತದೆ ಎಂದು ಹೇಳಲಾಗಿತ್ತು. ಅದೂ ಮುಂದಕ್ಕೆ ಹೋಯಿತು. […]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಹುಲಿ ಕುಣಿತ ಕಾರ್ಯಕ್ರಮ.

ಹೆಮ್ಮಾಡಿ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜೇಸಿಐ ಕುಂದಾಪುರ ಸಿಟಿ ಮತ್ತು ಕಿಯೋನಿಕ್ಸ್ ಚರ್ಚ್ ರಸ್ತೆ ಕುಂದಾಪುರ ಇವರಸಹಕಾರದೊಂದಿಗೆ ಚೌಡೇಶ್ವರಿ ಟೈಗರ್ಸ್ ಟಿ.ಟಿ. ರಸ್ತೆ ಕುಂದಾಪುರ ಇವರಿಂದ ಹುಲಿವೇಷ ಕುಣಿತ ಪ್ರದರ್ಶನ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರ, ಜೇಸಿಐ ಸಿಟಿ ಕುಂದಾಪುರದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಜೇಸಿಐ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಕಾರ್ತಿಕೇಯ ಮಧ್ಯಸ್ಥ, ಸ್ಥಾಪಕಾಧ್ಯಕ್ಷರಾದ ಶ್ರೀ ಹುಸೇನ್ ಹೈಕಾಡಿ, ಕಾರ್ಯಕ್ರಮದ ಪ್ರಾಯೋಜಕರಾದ ಶ್ರೀ ಹರ್ಷವರ್ಧನ್ […]

ಉಡುಪಿ-ಉಚ್ಚಿಲ ದಸರಾ ಮಹೋತ್ಸವ ಸಂಪನ್ನ.

ಉಚ್ಚಿಲ: ಉಡುಪಿ ಉಚ್ಚಿಲ ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ಮೆರವಣಿಗೆ ಶನಿವಾರ ‌ರಾತ್ರಿ ಸಂಪನ್ನಗೊಂಡಿತು.ಉಚ್ಚಿಲ ದಸರಾ ಉತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನಾ ಕಾರ್ಯವು ಸಾವಿರಾರು ಜನರ ಸಮ್ಮುಖದಲ್ಲಿ ಕಾಪು ಕಡಲ ತೀರದಲ್ಲಿ ವೈಭವೋಪೇತವಾಗಿ ನೆರೆವೇರಿತು. ಸಂಜೆ ನಡೆದ ಶೋಭಾಯಾತ್ರೆಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಮಿತಿಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ನಾಲ್ ಸುವರ್ಣ, […]

ಕಾಪು: ರಸ್ತೆ ದಾಟುವ ವೇಳೆ ಪಿಕ್‌ಅಪ್ ವಾಹನ ಢಿಕ್ಕಿ: ವ್ಯಕ್ತಿ ಮೃತ್ಯು.

ಕಾಪು: ರಾಷ್ಟ್ರೀಯ ಹೆದ್ದಾರಿ 66, ಕೊಪ್ಪಲಂಗಡಿ ಸಮೀಪ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.12ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಡಿವೈಡರನ್ನು ದಾಟಿ ಮಲ್ಲಾರು ಕೋಟೆ ರಸ್ತೆ ಕಡೆಗೆ ಹೋಗಲು ರಸ್ತೆಯ ಅಂಚಿನಲ್ಲಿ ನಿಂತುಕೊಂಡಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ:ವೀಕ್ಷಕರಿಗೆ ಬಿಗ್ ಶಾಕ್.

ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಸೀಸನ್ ಸಾಗುತ್ತಿದೆ. ಕಿಚ್ಚ ಸುದೀಪ್ ನಡೆಸಿಕೊಡುವುದರಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕರುನಾಡಿನಲ್ಲಿ ದೊಡ್ಡ ವೀಕ್ಷಕರಿದ್ದಾರೆ. ಬಿಗ್ ಬಾಸ್ ಸೀಸನ್-11 ಈ ಬಾರಿ ಆರಂಭವಾಗುವ ಮುನ್ನವೇ ನಿರೂಪಕರ ವಿಚಾರದಲ್ಲಿ ಭಾರೀ ಸದ್ದು ಮಾಡಿತ್ತು. ಮುಖ್ಯವಾಗಿ ಈ ಬಾರಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದು ಅನುಮಾನ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಆಯೋಜಕರು ಹಾಗೂ ಕಲರ್ಸ್ ಕನ್ನಡದ ಮಾತಿಗೆ ಒಪ್ಪಿದ ಕಿಚ್ಚ ಬಿಗ್ ಬಾಸ್ ನಡೆಸಿಕೊಡಲು ಒಪ್ಪಿದ್ದು, ನಿರೂಪಣೆ […]