ಉಡುಪಿ:ಕಂಪ್ಯೂಟರ್ ಜ್ಞಾನವಿಲ್ಲದೆ ಉದ್ಯೋಗ ವ್ಯವಹಾರ ಅಸಾಧ್ಯ – ನಾಗೇಶ್ ಹೆಗ್ಡೆ
ಉಡುಪಿ:ಇಂದು ಡಿಜಿಟಲ್ ಸಾಕ್ಷರತೆಯಿಲ್ಲದೆ ದೈನಂದಿನ ಜೀವನ ನಡೆಯುವುದು ಕಷ್ಟ. ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಜ್ಞಾನವಿಲ್ಲದೆ ಉದ್ಯೋಗ ವ್ಯವಹಾರ ಅಸಾಧ್ಯ ಎಂದು ಉಡುಪಿ ಸ್ವದೇಶ್ ಗ್ರೂಪ್ ಆಫ್ ಹೋಟೆಲ್ಸ್ ನ ಚೇರ್ಮನ್ ಮ್ಯಾನೇಜಿಂಗ್ ಡೈರೆಕ್ಟರ್ ನಾಗೇಶ್ ಹೆಗ್ಡೆ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಸಂಘದ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 17ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ […]
ಕಾರ್ಕಳ: ಮನೆಯ ವಿದ್ಯುತ್ ಮೀಟರ್ ಗೆ ಸಿಡಿಲು ಬಡಿದು ಮೂವರಿಗೆ ಗಾಯ
ಉಡುಪಿ: ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ನಡೆದಿದೆ. ಗಾಯಗೊಂಡವರನ್ನು ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಎಂದು ಗುರುತಿಸಲಾಗಿದೆ. ಇವರು ಮೂವರು ಮನೆಯಂಗಳದಲ್ಲಿ ಕುಳಿತಿದ್ದರು. ಈ ವೇಳೆ ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದಿದ್ದು, ಇದರಿಂದ ಮೂವರು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮನೆಯ ಉಳಿದ ಸದಸ್ಯರು ಮನೆಯೊಳಗಿದ್ದ ಕಾರಣ ಅಪಾಯದಿಂದ […]
ಬಾರ್ಕೂರು ನೇಶನಲ್ ಐಟಿಐನಲ್ಲಿ ಆಯುಧ ಪೂಜಾ ಕಾರ್ಯಕ್ರಮ
ಬ್ರಹ್ಮಾವರ:ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ನಮ್ಮ ನೇಶನಲ್ ಐಟಿಐನಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳ ಅತ್ಯುತ್ತಮ ಶ್ರಮದಿಂದ ವಿಜ್ರಂಭಣೆಯಿಂದ ನಡೆಯಿತು. ಈ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ನಿವ್ರತ್ತ ಪ್ರಾಂಶುಪಾಲರಾದ ಬಿ ಸೀತಾರಾಮ ಶೆಟ್ಟಿ, ಕಾರ್ಯದರ್ಶಿಗಳಾದ ಅಶೋಕ್ ಕುಮಾರ್ ಶೆಟ್ಟಿ, ದಿ ಬಾರ್ಕೂರು ಎಜ್ಯುಕೇಶನಲ್ ಸೊಸೈಟಿಯ ಆಡಳಿತ ಸಂಯೋಜಕಾದ ಆರ್ಚಿಬಾಲ್ಡ್ ಫುರ್ಟಾಡೋ, ಸಂಸ್ಥೆಯ ನಿವೃತ್ತ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ದಿನಕರ್ ತೋಳಾರ್, ಹೇರಾಡಿ […]
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಅಪಪ್ರಚಾರ
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ. ಉಡುಪಿ- ಉಚ್ಚಿಲ ದಸರಾಕ್ಕೆ ಎಕೆಎಂಎಸ್ ಸಂಸ್ಥೆಯವರು ಉಚಿತ ಬಸ್ ಸೇವೆ ಕಲ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳನ್ನು ದಸರಾ ಕಮಿಟಿಯವರು ಸನ್ಮಾನಿಸಿದ್ದರು. ಆದರೆ, ಇದಕ್ಕೆ ನನ್ನನ್ನು ಲಿಂಕ್ ಮಾಡಿ, ನನ್ನ ರಾಜಕೀಯ ಭವಿಷ್ಯವನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ. ನನ್ನ ಪೋಟೊವನ್ನು ಎಡಿಟ್ ಮಾಡಿ, ನನ್ನನ್ನು ಮೊಗವೀರ ಸಮುದಾಯದಿಂದ ದೂರ ಇಡಬೇಕೆಂಬ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ […]
ಕಾಂಗ್ರೆಸ್ ನಲ್ಲಿ ಕದ್ದು ವಾಪಸು ಕೊಟ್ಟರೆ ಅಪರಾಧಿಗಳಲ್ಲ ಎಂಬ ಕಾನೂನು ಜಾರಿಯಲ್ಲಿದೆ: ಛಲವಾದಿ ನಾರಾಯಣಸ್ವಾಮಿ
ಉಡುಪಿ: ಕಾಂಗ್ರೆಸ್ ನಲ್ಲಿ ಹೊಸ ಅಲಿಖಿತ ಕಾನೂನು ಜಾರಿಗೆ ಬಂದಿದೆ. ಯಾರು ಬೇಕಾದರೂ ಕದಿಯಬಹುದು. ವಾಪಸು ಕೊಟ್ಟ ನಂತರ ಅವರು ಅಪರಾಧಿಗಳಲ್ಲ. ಈ ರೀತಿಯಲ್ಲಿ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದ್ದಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.ಉಡುಪಿಯಲ್ಲಿ ಇಂದು ನಡೆದ ಜನಪ್ರತಿನಿಧಿಗಳ ಸಮಾವೇಶಕ್ಕೆ ಆಗಮಿಸಿದ್ದ ಅವರು, ಮಲ್ಲಿಕಾರ್ಜುನ್ ಖರ್ಗೆ ಸೈಟ್ ವಾಪಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.ಸೈಟ್ ವಾಪಸ್ ಕೊಟ್ಟರೆ ನಮ್ಮ ಹೋರಾಟದ ವೇಗ ಕಡಿಮೆಯಾಗುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಚೆನ್ನಾಗಿ ಹೋರಾಟ ಮಾಡುತ್ತಿದ್ದೇವೆ. ಐದು […]