ಉಡುಪಿ, ದ.ಕ. ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ..!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಯೆಲ್ಲೋ […]

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ನಿಶ್ಚಿತ; ಬಿ.ವೈ ವಿಜಯೇಂದ್ರ

ಉಡುಪಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ಪಟ್ಟಿ ಬಹಳ ದೊಡ್ಡದಾಗಿದೆ. ಯಾರ ಯಾರ ಹೆಸರಿದೆ ಎಂಬುವುದು ಸದ್ಯದಲ್ಲೇ ಬಹಿರಂಗ ಆಗಲಿದೆ. ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿಹಾಕಿಕೊಂಡಿರುವ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲೇಬೇಕಾದ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅನೇಕ ಹಿರಿಯರು ಮುಖ್ಯಮಂತ್ರಿ ಆಗಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡ್ತಾರೆ ಎಂಬುವುದನ್ನೇ ಕಾದು ಕುಳಿತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಂತೂ ನಿಶ್ಚಿತ ಎಂದರು

ಎರಡು ದಿನಗಳೊಳಗೆ ಸಂಡೂರು, ಶಿಗ್ಗಾಂವಿ, ಚೆನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ: ಬಿ.ವೈ. ವಿಜಯೇಂದ್ರ

ಉಡುಪಿ: ಸಂಡೂರು, ಶಿಗ್ಗಾಂವಿ, ಚೆನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಆಗಿದೆ. ಚನ್ನಪಟ್ಟಣದ ಅಭ್ಯರ್ಥಿ ಯಾರಾಗಬೇಕೆಂದನ್ನು ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತಾರೆ. ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಬಗ್ಗೆ ರಾತ್ರಿ ಚರ್ಚಿಸಿ, ಅಂತಿಮ‌ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ನಾಳೆ ಅಥವಾ ನಾಡಿದ್ದು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರು ಕ್ಷೇತ್ರದಲ್ಲೂ ಕೂಡ ಬಿಜೆಪಿ, ಎನ್ ಡಿಎ ಅಭ್ಯರ್ಥಿ […]

ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಬಲಿ ಉತ್ಸವ ಸಂಪನ್ನ

ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ವಿಜಯ ದಶಮಿಯ ಪರ್ವಕಾಲದಲ್ಲಿ ಬಲಿ ಉತ್ಸವವು ಕ್ಷೇತ್ರದ ಧರ್ಮದ ಶ್ರೀ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸರ್ವೇಶ ತಂತ್ರಿಗಳ ತಂತ್ರತ್ವ ದಲ್ಲಿ ಸಂಪನ್ನಗೊಂಡಿತು.. ಸಂಜೆ ಆರಾಧನಾ ರಂಗ ಪೂಜೆಯ ಬಳಿಕ ಬಲಿ ಉತ್ಸವ ಆರಂಭಗೊಂಡಿತು.. ಬಲಿ ಉತ್ಸವದಲ್ಲಿ ಶ್ರೀ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತು ವಿಶೇಷ ಆಕರ್ಷಣೆಯಾಗಿತ್ತು. ಪಲ್ಲಕ್ಕಿ ಉತ್ಸವ ವಸಂತ ಪೂಜೆ ನೆರವೇರಿತು. […]

ಅ.18-19ರಂದು ಉಡುಪಿಯಲ್ಲಿ ಟೀಚರ್ ಶೈಕ್ಷಣಿಕ ಹಬ್ಬ

ಉಡುಪಿ: ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19 ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಬಿಕ್ಕಟ್ಟುಗಳೊಡನೆ ವರ್ತಮಾನದ ಮುಖಾಮುಖಿ ಎಂಬ ಹೆಸರಿನಲ್ಲಿ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಶೈಕ್ಷಣಿಕ ನೀತಿಗಳು, ಅವುಗಳ ಅನುಷ್ಠಾನದಲ್ಲಿ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ, […]