ಉಡುಪಿ ಉಪ-ಚುನಾವಣೆ: ಮದ್ಯ ಮಾರಾಟ ನಿಷೇಧ:ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಉಡುಪಿ: ಚುನಾವಣಾ ಆಯೋಗವು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಉಪ-ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣೆಯನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಅಕ್ಟೋಬರ್ 21 ರಂದು ಮತದಾನ ಹಾಗೂ ಅಕ್ಟೋಬರ್ 24 ರಂದು ಮತ ಎಣಿಕೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕಕ್ಕಿಂತ 48 ಗಂಟೆಗಳ ಮುಂಚಿತವಾಗಿ ಕರ್ನಾಟಕ ಅಬಕಾರಿ ಕಾಯ್ದೆ […]

ಸುಳ್ಯ: ಕಂಡೆಕ್ಟರ್‌ಗೆ ಎದೆ ನೋವು; ಆಸ್ಪತ್ರೆಗೆ ಸಾಗಿಸುವ ವೇಳೆ ಮೃತ್ಯು

ಸುಳ್ಯ: ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸೋಮವಾರ ವರದಿಯಾಗಿದೆ. ಗುರು ಪ್ರಸಾದ್ ಕುಂಚಡ್ಕ(30) ಸಾವನ್ನಪ್ಪಿದ ಚಾಲಕ ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ .

ಉಡುಪಿ: ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತರನ್ನಾಗಿ ಛಾಯಾಚಿತ್ರ ಪತ್ರಕರ್ತ ಹಾಗೂ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ‌ ಕೊಡವೂರು ಅವರನ್ನು ಜಯಕರ ಶೆಟ್ಟಿ ಇಂದ್ರಾಳಿ ನೇಮಿಸಿದ್ದಾರೆ.