ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಉಡುಪಿ: ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ ಎಂದರು. ಕನ್ನಡ […]
ಪಡುತೋನ್ಸೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ. ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ. ಹೊಳೆಯಿಂದ ಶವ ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಅವರು ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಲ್ಪೆ ಠಾಣೆಯ ಎಎಸ್ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು.
ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ; 40 ಕೆ.ಜಿ. ಪಟಾಕಿ ವಶ
ಉಡುಪಿಯ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು […]
ಉಡುಪಿ:ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಕರ್ನಾಟಕ ಸಂಭ್ರಮ 50 ರ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನುಅರ್ಥಪೂರ್ಣವಾಗಿ ಹಾಗೂ ವೈಭವಯುತವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, […]
ಉಡುಪಿ :ಕಾಲುಬಾಯಿ ಲಸಿಕೆ ಕಾರ್ಯಕ್ರಮದಲ್ಲಿ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ […]