ಮಣಿಪಾಲ: ಅ.19 ರಂದು MSDCಯಲ್ಲಿ “ಸೆಲ್ಫ್ ಫೇಶಿಯಲ್ ಕ್ಲೀನಪ್” ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ ಅಕ್ಟೋಬರ್ 19 ರಂದು ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ “ಸೆಲ್ಫ್ ಫೇಶಿಯಲ್ ಕ್ಲೀನಪ್” ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ ನಡೆಯಲಿದೆ. ಕಲಿಕೆಯ ಫಲಿತಾಂಶ:ತಮ್ಮ ಮುಖವನ್ನು ಸ್ವಚ್ಛಗೊಳಿಸಲು ಕಲಿಯಬಹುದು. ಯಾರು ಹಾಜರಾಗಬಹುದು: (ಪುರುಷರು ಮತ್ತು ಮಹಿಳೆಯರು) ಎಲ್ಲರಿಗೂ ತೆರೆದಿರುತ್ತದೆ. ಗೃಹ ತಯಾರಕರು, ಕೆಲಸ ಮಾಡುವ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹಾಜರಾಗಬಹುದು. ಈ ಕೌಶಲ್ಯ ತರಬೇತಿಯ ಶುಲ್ಕ ಕೇವಲ […]

ತೀರ್ಥಹಳ್ಳಿಯ ತಹಶೀಲ್ದಾರ್‌ ಹೃದಯಘಾತದಿಂದ ನಿಧನ

ತೀರ್ಥಹಳ್ಳಿ: ಬೆಂಗಳೂರಿನಲ್ಲಿ ಬುಧವಾರ ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ಪ್ರತ್ಯೇಕ ಪ್ರಕರಣ – ನಾಲ್ವರ ಆತ್ಮಹತ್ಯೆ

ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ: ಕುಂದಾಪುರ: ತಾಯಿಯ ಅನಾರೋಗ್ಯದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಂದಾವರ ಗ್ರಾಮದ ನವೀನ ಡಿಸೋಜ(42) ಎಂಬವರು ಅ.15ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆ:ಕೋಟ: ಮಗನ ಅಕಸ್ಮಿಕ ಸಾವಿನಿಂದ ಖಿನ್ನತೆಗೆ ಒಳಗಾಗಿ ಅ.14ರಂದು ಸಂಜೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆವರ್ಸೆ ಗ್ರಾಮದ ಕಿರಾಡಿ ಬೆಳ್ಳ(65) […]

ಮಂಗಳೂರು: ಮರಕ್ಕೆ ಸ್ಕೂಟರ್ ಡಿಕ್ಕಿ; ಸವಾರ ಸಾವು

ಮಂಗಳೂರು: ಮಾಡೂರು ಶಾರದಾ ನಗರದಲ್ಲಿ ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು. ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್‌ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.