ಉಡುಪಿ:ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಸರಕಾರಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ತಾ. 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.00 ಗಂಟೆಯಿಂದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವು ನಡೆಯಲಿದೆ. ಬೆಳಿಗ್ಗೆ 10.00 ಗಂಟೆಗೆ ದೀಪ ಬೆಳಗಿಸುವುದರ ಮೂಲಕ ಈ ರಕ್ತದಾನ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ನಾಯಕರಾದ ಅಶೋಕ್ ಕುಮಾರ್ ಕೊಡವೂರು, ವಿನಯ್ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮಂಜುನಾಥ್ ಭಂಡಾರಿ, ಗೋಪಾಲ್ ಪೂಜಾರಿ, ಮುನಿಯಾಲು ಉದಯ್ ಶೆಟ್ಟಿ, ದಿನೇಶ್ ಹೆಗ್ಡೆ […]
ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜು ಪೂಜಾರಿ ಗೆಲುವು ಖಚಿತ: ಕಾಂಗ್ರೆಸ್ ಮುಖಂಡ ಡಿ.ಆರ್. ರಾಜು ವಿಶ್ವಾಸ

ಉಡುಪಿ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಕಾರ್ಕಳದ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜು ಪೂಜಾರಿಯವರು ರಾಜಕಾರಣದಲ್ಲಿ ಸುಧೀರ್ಘ ಅನುಭವ ಹೊಂದಿರುವ ರಾಜಕಾರಣಿ, ಕಾರ್ಕಳದಲ್ಲಿ ಗೋಪಾಲ ಭಂಡಾರಿಯವರಂತಹ ಸರಳ ವ್ಯಕ್ತಿತ್ವದ ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಈ ಬಾರಿ ಅವಕಾಶ ನೀಡಿದೆ. ರಾಜು ಪೂಜಾರಿಯವರು ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ […]
ಡಿ.9ರಿಂದ 15ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಬ್ರಹ್ಮಮಂಡಲ ಸೇವೆ

ಉಡುಪಿ: ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ ನಡೆಯಲಿದೆ ಎಂದು ಶತಚಂಡಿಕಾ ಯಾಗ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದರು. ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗದೇವರ ನುಡಿ ಹಾಗೂ ಅಷ್ಟಮಂಗಲ ಪ್ರಶ್ನೆಯಲ್ಲಿ ಸೂಚಿತವಾದಂತೆ ದೇವಿ ಪ್ರೀತ್ಯರ್ಥವಾಗಿ ಶತಚಂಡಿಕಾ ಯಾಗ ಹಾಗೂ ನಾಗ ಬ್ರಹ್ಮ ನಂದಿ ರಕ್ತೇಶ್ವರಿ ಮತ್ತು ಕ್ಷೇತ್ರಪಾಲ ಪ್ರೀತ್ಯರ್ಥವಾಗಿ ಬ್ರಹ್ಮಮಂಡಲ ಸೇವೆ ನಡೆಸಲಾಗುತ್ತದೆ. ಸುಮಾರು […]
ಕಿಶೋರ್ ಕುಮಾರ್ ಪ್ರಚಂಡ ಗೆಲುವಿನ ಮೂಲಕ ರಾಜ್ಯ ಸರಕಾರದ ವೈಫಲ್ಯಕ್ಕೆ ಉತ್ತರ ನೀಡೋಣ; ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಬಿಜೆಪಿ ಪಕ್ಷದ ಸಾಮಾನ್ಯ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಬೊಟ್ಯಾಡಿ ರವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ನೀಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಬ್ರಹ್ಮಾವರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಪೂರ್ವಭಾವಿಯಾಗಿ ಗ್ರಾಮ ಪಂಚಾಯತ್ ಸದಸ್ಯರ ಸಭೆಯಲ್ಲಿ ಯಶ್ ಪಾಲ್ ಸುವರ್ಣ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರಕಾರ […]
ಶೋಭಾ ಕರಂದ್ಲಾಜೆ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್

ಉಡುಪಿ: ಶೋಭಾ ಕರಂದ್ಲಾಜೆ ಬಗ್ಗೆ ಮಹಿಳೆಯಾಗಿ ವೈಯಕ್ತಿಕ ಗೌರವ ಇದೆ. ಆದರೆ ಅವರು ಯಾವಾಗಲೂ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಡಾ ಹಗರಣದ ದಾಖಲೆ ಸುಟ್ಟಿದ್ದಾರೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಉಡುಪಿಯಲ್ಲಿ ತಿರುಗೇಟು ನೀಡಿದ ಅವರು, ಮೂಡಾ ಮೇಲೆ ರಾಜಕೀಯ ಪ್ರೇರಿತ ಇಡಿ ರೈಡ್ ನಡೆಯುತ್ತಿದೆ. ರಾಜ್ಯಪಾಲರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದೇ […]