ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ […]
ಕಟಪಾಡಿ ತ್ರಿಶಾ ವಿದ್ಯಾ ಕಾಲೇಜು : ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಫ್ರೆಶರ್ಸ್ ಡೇ ಕಾರ್ಯಕ್ರಮ

ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಫ್ರೆಶರ್ಸ್ ಡೇ ಕಾರ್ಯಕ್ರಮವು ಅಕ್ಟೋಬರ್ 18ರಂದು ಕಟಪಾಡಿಯ ಎಸ್. ವಿ. ಎಸ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿನಯಕುಮಾರ್ ಸೊರಕೆ ರವರು ವಿದ್ಯಾರ್ಥಿ ಸಂಘಟನೆಯೇ ದೇಶದ ಬಲವಾದ ಸಂಘಟನೆ. ವಿದ್ಯಾರ್ಥಿಗಳಲ್ಲಿ ಕಾಲೇಜು ಶಿಕ್ಷಣದ ಸಮಯದಲ್ಲೇ ಚುನಾವಣೆ, ದೇಶಪ್ರೇಮ, ಕರ್ತವ್ಯಗಳ ಬಗ್ಗೆ ಜ್ಞಾನ ಮೂಡಿಸುವ ಕಾರ್ಯವಾಗಬೇಕು. ವಿದ್ಯಾರ್ಥಿಗಳನ್ನು ಸಮಾಜದ ಸವಾಲಿಗೆ ತಯಾರಾಗುವ ಹಾಗೆ ಮಾಡಿದರೆ ಸಮಾಜ ಅಭಿವೃದ್ಧಿ ಸಾಧ್ಯ ಎಂದರು ಹಾಗೂ ರಘುಪತಿ ಭಟ್ […]
ಇಂದಿನಿಂದ ಪಾಪ್ ಅಪ್ ಮಾರ್ಕೆಟ್ ಮಂಗಳೂರು ಇದರ ದೀಪಾವಳಿ ಶಾಪಿಂಗ್ ಮೇಳ

ಮಂಗಳೂರು: ಪಾಪ್ ಅಪ್ ಮಾರ್ಕೆಟ್ ಮಂಗಳೂರು ವತಿಯಿಂದ ವಾರ್ಷಿಕ ಫ್ಲಿಯಾ ಮಾರುಕಟ್ಟೆಯ 7ನೇ ಆವೃತ್ತಿಯ ಜನಪ್ರಿಯ ದೀಪಾವಳಿ ಶಾಪಿಂಗ್ ಮೇಳ ಅ.19 ಮತ್ತು 20ರಂದು ಬೈಂದೂರಿನ ಸೇಂಟ್ ಸೆಬಾಸ್ಟಿಯನ್ ಹಾಲ್‌ನಲ್ಲಿ ನಡೆಯಲಿದೆ. ಈ ಮೇಳದಲ್ಲಿ 50ಕ್ಕಿಂತಲೂ ಹೆಚ್ಚಿನ ಸ್ಟಾಲ್ ಗಳೊಂದಿಗೆ ಬಟ್ಟೆ, ಫ್ಯಾಷನ್ ಪರಿಕರಗಳು, ಚಿತ್ರಕಲೆ, ಮಕ್ಕಳ ಉಡುಪುಗಳು, ಮನೆಯ ಅಲಂಕಾರಿಕ ವಸ್ತುಗಳು, ಬೇಕರಿ, ಆಹಾರ ಮಳಿಗೆಗಳು ಇರಲಿದೆ. ಅಲ್ಲದೆ, ಮಕ್ಕಳಿಗಾಗಿ ಆಕ್ಟಿವಿಟಿ ಜೋನ್ ಗಳು, ರೊಬೋಟಿಕ್ ಮತ್ತು ಸೈನ್ಸ್ ಏರಿಯಾಗಳನ್ನು ಒಳಗೊಂಡಿದ್ದು, ಸ್ಥಳೀಯ ಉತ್ಪನ್ನಗಳಿಗೆ ಪ್ರಾಮುಖ್ಯತೆಯನ್ನು […]
ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಉಡುಪಿ ಜಿಲ್ಲಾ ಸ್ಕೌಟ್ಸ್ ಆಯುಕ್ತ […]
ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ?

ಉಡುಪಿ: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಗೆ ಮುಕ್ತಿ ಯಾವಾಗ ಎಂಬ ಪ್ರಶ್ನೆ ಉಡುಪಿ ಜನರನ್ನು ಕಾಡುತ್ತಿದೆ. ರೈಲ್ವೆ ಸೇತುವೆ ಗರ್ಡರ್ ಬಂದ ತಿಂಗಳೊಳಗೆ ಕಾಮಗಾರಿ ಶುರುವಾಗಿ ಎರಡು ಮೂರು ತಿಂಗಳಲ್ಲಿ ಸೇತುವೆ ಸಂಚಾರ ಮುಕ್ತವಾಗಲಿದೆ ಎಂದು ಜನ ಪ್ರತಿನಿಧಿಗಳು, ಅಧಿಕಾರಿಗಳು ವರ್ಷದ ಹಿಂದೆಯೇ ಹೇಳಿದ್ದರು. ಆದರೆ, ಇಲ್ಲಿನ ಸ್ಥಿತಿಯೇ ಬೇರೆಯಿದೆ. ಗರ್ಡರ್ ಬಂದು ವರ್ಷ ಕಳೆದರೂ ಕಾಮಗಾರಿ ಮಾತ್ರ ಮುಂದೆ ಹೋಗುತ್ತಲೇ ಇಲ್ಲ. ಕಾರಣ ಒಂದು ನಟ್, ಬೋಲ್ಡ್ ಫಿಟ್ ಮಾಡಲೂ […]