ಉಡುಪಿ : ವಿಧಾನಪರಿಷತ್ ಉಪಚುನಾವಣೆ : ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪ-ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ […]
ಮಂಗಳೂರು: ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು.

ಮಂಗಳೂರು: ಅ.18: ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಶ್ರೀಮಾನ್ ಮೈಕಲ್ ಡಿಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು. ಶ್ರೀಮಾನ್ ಮೈಕಲ್ ಡಿ ಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, […]
ಮಣಿಪಾಲ: ಕಂಪನಿ ಕೆಲಸಕ್ಕೆ 5 ಜನ ಯುವಕರು ಬೇಕಾಗಿದ್ದಾರೆ.

ಮಣಿಪಾಲ: ಪಿಕ್ಕರ್ ಪ್ಯಾಕರ್ ಕಂಪನಿ ಕೆಲಸಕ್ಕೆ 5 ಜನ ಯುವಕರು ಬೇಕಾಗಿದ್ದಾರೆ. ಸಮಯ: ಬೆಳಿಗ್ಗೆ 9:30 ರಿಂದ ಸಂಜೆ 6:30ರವರೆಗೆ. ವಯಸ್ಸು: 35 ವರ್ಷದ ಒಳಗೆ ಸಂಬಳ ತಿಂಗಳಿಗೆ ರೂ.12,000-15,000 ರ ವರೆಗೆ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99456 25556