ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ.

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದ ಆರೋಪಿ ಶಿಕ್ಷಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ ಎಫ್‌ಟಿಎಸ್‌ಸಿ-1)ವು 5 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹತ್ಯಡ್ಕ ಅರಸಿನಮಕ್ಕಿ ಪಡ್ಡಾಯಿಬೆಟ್ಟುವಿನ ಪ್ರಸಕ್ತ ಕಲ್ಲಮುಂಡ್ಕೂರು ನಿವಾಸಿ ಗುರುವ ಮೊಗೇರ ಯಾನೆ ಗುರುವ ಎಂ.ಪಿ. (49) ಶಿಕ್ಷೆಗೊಳಗಾದ ಆರೋಪಿ. ಶಿಕ್ಷಕ ವೃತ್ತಿಯಲ್ಲಿದ್ದ ಆರೋಪಿಯು ರಜೆ ಅಥವಾ ಪಠ್ಯಕ್ಕೆ ಸಂಬಂಧಪಟ್ಟಂತೆ ಏನಾದರೂ ಸಂದೇಹವಿದ್ದರೆ ಶಾಲೆಯಲ್ಲಿರುವ […]

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ವಿಧಿವಶ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ […]

ಕುಂದಾಪುರ: ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ; ಡಾ.ತಲ್ಲೂರು ಶಿವರಾಮ ಶೆಟ್ಟಿ

ಕುಂದಾಪುರ: ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ಸಂದಿದೆ. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ವಿದ್ವಾನ್ ಹಾಗೂ ಹಂದೆಯವರಿಗೆ ಪ್ರಶಸ್ತಿ ಲಭಿಸಿದೆ. ಇಪ್ಪತ್ತೈದು ವರ್ಷ ನೆಲೆಯನ್ನು ಕಂಡುಕೊಂಡು 108 ಕಾರ್ಯಕ್ರಮವನ್ನು ಹಮ್ಮಿಕೊಂಡ ಯಶಸ್ವೀ ಕಲಾವೃಂದಕ್ಕೆ ಸರ್ವರೂ ನೆರವಾಗಬೇಕು. ಅನೇಕ ಮಕ್ಕಳನ್ನು ರಂಗಕ್ಕೆ ತಂದ ಸಂಸ್ಥೆಯನ್ನು ಸರಕಾರವೂ ಗುರುತಿಸಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ […]