ಬಿಪಿಎಲ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ: ಯಾರೆಲ್ಲ ಪಡಿತರ ಚೀಟಿ ಹೊಂದಲು ಅನರ್ಹರು. ಇಲ್ಲಿದೆ ವಿವರ..!

ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ […]
ವಿಧಾನ ಪರಿಷತ್ ಉಪಚುನಾವಣೆ; ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮತದಾನ

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಗೆ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.ಉಡುಪಿ ನಗರಸಭೆಯ ಮತಗಟ್ಟೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು, ಬಿಜೆಪಿ ನಗರಸಭಾ ಸದಸ್ಯರ ಜೊತೆಗೂಡಿ ಮತದಾನ ಮಾಡಿದರು.
ವಿಧಾನ ಪರಿಷತ್ ಉಪಚುನಾವಣೆ; ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತದಾನ

ಉಡುಪಿ:ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕಾರ್ಕಳ ಪುರಸಭೆಯಲ್ಲಿ ಮತದಾನ ಮಾಡಿದರು.
ವಿಧಾನಪರಿಷತ್ ಉಪಚುನಾವಣೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮತದಾನ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಮತದಾನ ಮಾಡಿದರು.
ಕೊಲ್ಲೂರು: ವ್ಯಕ್ತಿಯ ಚಿನ್ನಾಭರಣಗಳಿದ್ದ ಪರ್ಸ್ ಕಳವು: ಪ್ರಕರಣ ದಾಖಲು

ಕೊಲ್ಲೂರು: ಕೊಲ್ಲೂರು ದೇವರ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರ ಚಿನ್ನಾಭರಣ ಇದ್ದ ಪರ್ಸ್ ಕಳವಾಗಿರುವ ಘಟನೆ ಅ.18ರಂದು ಸಂಜೆ ವೇಳೆ ನಡೆದಿದೆ.ಕೇರಳದ ಸಾಯಿಪ್ರಸನ್ನ ಎಂಬವರು ಚಿನ್ನದ ಆಭರಣವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಬಂದಿದ್ದು, ಬಳಿಕ ಪರಿಶೀಲಿಸಿದಾಗ ಅವರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಇದ್ದ ಪರ್ಸ್ ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.